ಮಂಡ್ಯ: ಜೆಡಿಎಸ್ ನಾಯಕರು ನಟರ ಟೀಕೆಯ ಭರದಲ್ಲಿ ವಿವಾದಗಳನ್ನು ಮೈ ಮೇಲೆ ಎಳೆದುಕೊಳ್ಳುತ್ತಿದ್ದಾರೆ. 2 ದಿನಗಳ ಹಿಂದೆ ಜೆಡಿಎಸ್ ಶಾಸಕರೊಬ್ಬರು ನಟರ ಆಸ್ತಿ ತನಿಖೆಯ ಬಗ್ಗೆ ಮಾತನಾಡಿದ್ದರು. ಈಗ ಮತ್ತೊಬ್ಬ ಮುಖಂಡ ದರ್ಶನ್ ಹಾಗೂ ಯಶ್ ಕುರಿತು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ಸಮಾರಂಭದಲ್ಲಿ ನಟರಾದ ದರ್ಶನ್ ಹಾಗೂ ಯಶ್ ಮೇಲೆ ವಾಗ್ದಾಳಿ ನಡೆಸುವ ಭರದಲ್ಲಿ ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಸಂತೋಷ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಿನ್ನೆ ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.
ಚಿತ್ರ ನಟರನ್ನು ಟೀಕಿಸುವ ಭರದಲ್ಲಿ ಮತ್ತೊಂದು ಎಡವಟ್ಟನ್ನು ಜೆಡಿಎಸ್ ಮುಖಂಡರು ಮಾಡಿಕೊಂಡಿದ್ದಾರೆ. ಮೊನ್ನೆಯಷ್ಟೇ ಕೆ.ಆರ್. ಪೇಟೆ ಶಾಸಕ ನಾರಾಯಣ ಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ಮೂಲಕ ಯಶ್ ಮತ್ತು ದರ್ಶನ್ ಅಭಿಮಾನಿಗಳ ಕೆಂಗಣ್ಣಿಗೆ ಜೆಡಿಎಸ್ ಗುರಿಯಾಗಿದೆ.