ಮಂಡ್ಯ: ವಿದ್ಯುತ್ ತಂತಿ ತುಂಡಾಗಿ ಬಿದ್ದು ವ್ಯಕ್ತಿ ಸಾವಿಗೀಡಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಟಿ.ಬಿ. ಮಂಚನಹಳ್ಳಿ ಗ್ರಾಮದ ಬಳಿ ನಡೆದಿದೆ.
ಅಕ್ಕಿ ಮಂಚನಹಳ್ಳಿ ಗ್ರಾಮದ ದರ್ಶನ್ (35) ಮೃತ ದುರ್ದೈವಿ. ನ್ಯಾಯಾಬೆಲೆ ಅಂಗಡಿಯಿಂದ ರೇಷನ್ ತರಲು ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ಘಟನೆ ನಡೆದಿದೆ ಎನ್ನಲಾಗಿದೆ.
ದುರ್ಘಟನೆ ಸಂಭವಿಸಿದ್ದರೂ ಸ್ಥಳಕ್ಕೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ದೂರಿದ್ದಾರೆ. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.