ಮಂಡ್ಯ : ನಾಲೆ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವಿಗೀಡಾದ ಘಟನೆ ಪಾಂಡವಪುರ ತಾಲೂಕಿನ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಬೇಗೂರಿನ ಮಹೇಶ್(28) ಮೃತ ದುರ್ದೈವಿಯಾಗಿದ್ದು, ಸಂಜೆ ಕೆಲಸ ಮಾಡುತ್ತಿದ್ದಾಗ ಘಟನೆ ನಡೆದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಗಾಯಗೊಂಡಿದ್ದ ಕಾರ್ಮಿಕ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಪಾಂಡವಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.