ಮಂಡ್ಯ: ಸರಗಳ್ಳತನಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕನನ್ನು ಹಿಡಿದು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಘಟನೆ ಜಿಲ್ಲೆಯ ಸಮೀಪದ ಕೊತ್ತತ್ತಿ ಗ್ರಾಮದಲ್ಲಿ ನಡೆದಿದೆ.
ಜಮೀನಿಗೆ ಹೋಗುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಸಿಯಲು ಯತ್ನಿಸಿದ ಯುವಕನನ್ನು ಹಿಡಿದು ಧರ್ಮದೇಟು ನೀಡಲಾಗಿದೆ. ಈತನ ಜೊತೆಯಲ್ಲಿದ್ದ ಇನ್ನೂ ಮೂವರು ಪರಾರಿಯಾಗಿದ್ದಾರೆ.
ಮಂಜುಳಾ ಎಂಬ ಮಹಿಳೆ ಜಮೀನಿನ ಬಳಿ ಹೋಗುತ್ತಿದ್ದಾಗ ಯುವಕರ ತಂಡ ಸರ ಕದಿಯಲು ಮುಂದಾಗಿದೆ. ಈ ಸಂದರ್ಭ ಮಹಿಳೆಯ ಕಿರುಚಾಟ ಕೇಳಿಸಿಕೊಂಡು ಸ್ಥಳೀಯರು ನಾಲ್ವರು ಯುವಕರಲ್ಲಿ ಓರ್ವನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.
ವಿಚಾರ ತಿಳಿದ ಮಂಡ್ಯ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ಮಾಡುತ್ತಿದ್ದಾರೆ. ಜೊತೆಯಲ್ಲಿದ್ದವರ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ.