ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಒಂದೇ ದಿನ 62 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್ ಹೆಚ್ಚಳ ಮಾಡಲಾಗುತ್ತಿದೆ.
ಸದ್ಯಕ್ಕೆ ಚಿಕಿತ್ಸೆ ನೀಡುತ್ತಿರುವ ಮಿಮ್ಸ್ 700 ಹಾಸಿಗೆ ಸಾಮಾರ್ಥ್ಯದ ಆಸ್ಪತ್ರೆಯಾಗಿದೆ. ಕೋವಿಡ್-19 ಚಿಕಿತ್ಸೆಗಾಗಿ ಸದ್ಯ 350 ಹಾಸಿಗೆಗಳ ಸಾಮಾರ್ಥ್ಯದ ಕೊಠಡಿಗಳನ್ನು ಮೀಸಲಿರಿಸಲಾಗಿದೆ. ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮತ್ತಷ್ಟು ಹಾಸಿಗೆ ಹೆಚ್ಚಳ ಮಾಡಲು ಜಿಲ್ಲಾಡಳಿತ ಮುಂದಾಗಿದೆ.
700 ಹಾಸಿಗೆ ಸಾಮಾರ್ಥ್ಯದ ಆಸ್ಪತ್ರೆ ಇದ್ದರೂ ಸಹ ಜಿಲ್ಲಾಡಳಿತ ಕೆಲ ಹೊಸ ಕಟ್ಟಡಗಳಲ್ಲಿ ಚಿಕಿತ್ಸೆ ನೀಡಲು ತಯಾರಿ ನಡೆಸಬಹುದು ಎನ್ನಲಾಗಿದೆ.