ETV Bharat / state

ಮಂಡ್ಯ: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರಿಂದ ನಾಳೆ ಬೃಹತ್ ಪರೇಡ್​

ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ರೈತರು ಬೃಹತ್​ ಟ್ರ್ಯಾಕ್ಟರ್​ ಮೆರವಣಿಗೆ ಹಮ್ಮಿಕೊಂಡಿದ್ದು, ಈ ಹಿನ್ನೆಲೆ ಮಂಡ್ಯದಲ್ಲಿಯೂ ರೈತರು ಪ್ರತಿಭಟನೆ ನಡೆಸಲಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮಂಡ್ಯದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ..

Tomorrow's Parade by Farmers in Oppose to Amendment of Agriculture Act
ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರಿಂದ ನಾಳೆ ಬೃಹತ್ ಪರೇಡ್​
author img

By

Published : Jan 25, 2021, 4:01 PM IST

ಮಂಡ್ಯ : ರೈತ ವಿರೋಧಿ ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧ ಮಂಡ್ಯದಲ್ಲಿ ಜ.26ರಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ ತಿಳಿಸಿದರು.

ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರಿಂದ ನಾಳೆ ಬೃಹತ್ ಪರೇಡ್..​

ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಕಾಯ್ದೆಯ ವಿರುದ್ದ ಗಣರಾಜ್ಯೋತ್ಸವ ದಿನ ರೈತರ ಬೃಹತ್ ಪರೇಡ್ ನಡೆಸಲು ತೀರ್ಮಾನಿಸಿದ್ದೇವೆ​ ಎಂದರು.

ಮಂಡ್ಯದ ಸಿಲ್ವರ್ ಜ್ಯೂಬ್ಲಿ ಪಾರ್ಕ್​​​ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಎಪಿಎಂಸಿ ತಿದ್ದುಪಡಿ, ಕೃಷಿ ಕಾಯ್ದೆ, ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಲಾಗುವುದು ಎಂದರು. ಈ ಪ್ರತಿಭಟನೆಯಲ್ಲಿ ಸಾವಿರಾರು ರೈತ ಬಂಧುಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಕೃಷಿ ಕಾಯ್ದೆ ವಿರೋಧಿಸಿ ಸಿಐಟಿಯು ಸಂಘಟನೆ, ವಿಕಲಚೇತನರ ಒಕ್ಕೂಟದಿಂದ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.