ಮಂಡ್ಯ: ಕೋತಿಗಳನ್ನು ಬೋನಿಗೆ ಹಾಕಿಕೊಂಡು ಸಾಗಾಣೆ ಮಾಡುತ್ತಿದ್ದ ಗೂಡ್ಸ್ ಆಟೋವನ್ನು ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರು ತಡೆದ ಘಟನೆ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ.
ಈ ಮಂಗಗಳನ್ನು ಮೈಸೂರಿನ ಉದಯಗಿರಿಯಿಂದ ಮೇಲುಕೋಟೆ ಅರಣ್ಯ ಪ್ರದೇಶದಲ್ಲಿ ಬಿಡುವ ಸಲುವಾಗಿ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂಬ ಮಾಹಿತಿ ಇದೆ. ಈ ಘಟನೆಯ ಸತ್ಯಾಸತ್ಯತೆ ಪರಿಶೀಲಿಸಿ ಸೂಕ್ತ ಕ್ರಮ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.