ಮಂಡ್ಯ: ಗಾಂಜಾ ಕಳ್ಳ ಸಾಗಣೆ ಮಾಡುತ್ತಿದ್ದ ಮೈಸೂರು ಮೂಲದ ಇಬ್ಬರನ್ನು ನಾಗಮಂಗಲ ಪೊಲೀಸರು ಬಂಧಿಸಿ, ಸುಮಾರು 10 ಲಕ್ಷ ರೂ. ಮೌಲ್ಯದ ಮಾಲನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರಿನ ಸುಹೇಲ್ ಅಹಮದ್ ಹಾಗೂ ಸೈಯದ್ ಅಕೀಲ್ ಅಹಮದ್ ಬಂಧಿತರು. ಮೈಸೂರಿನಿಂದ ಯಡಿಯೂರು ಕಡೆಗೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಿ, 10 ಲಕ್ಷ ರೂ. ಮೌಲ್ಯದ 2 ಕೆ.ಜಿ ಗಾಂಜಾ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ನಾಗಮಂಗಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.