ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದ ಮೈದಾನದಲ್ಲಿ ನಡೆಯುತ್ತಿರುವ 17 ವರ್ಷದೊಳಗಿನ ರಾಜ್ಯಮಟ್ಟದ ಅಥ್ಲೆಟಿಕ್ಸ್ನಲ್ಲಿ ಗಣಿನಾಡಿನ ಇಬ್ಬರು ಕ್ರೀಡಾಪಟುಗಳು ಹ್ಯಾಮರ್ ಥ್ರೋನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯ ಮಟ್ಟದ 17 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಅಥ್ಲೆಟಿಕ್ಸ್ ನ ಹ್ಯಾಮರ್ ಥ್ರೋ ( 37.33 ಮೀಟರ್ ) ಎಸೆತದಲ್ಲಿ ಬಳ್ಳಾರಿ ನಂದಿ ಶಾಲೆಯ ವಿದ್ಯಾರ್ಥಿನಿ ಕೀರ್ತಿ ಪ್ರಥಮಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅದೇ ಶಾಲೆಯ ಮತ್ತೋರ್ವ ವಿದ್ಯಾರ್ಥಿ ಯಶ್ವಂತ್ 600 ಮೀಟರ್ ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಆದರ್ಶ ಶಾಲೆಯ ವಿದ್ಯಾರ್ಥಿ ಸುದೀಕ್ಷ ಉದ್ದ ಜಿಗಿತದಲ್ಲಿ 8ನೇ ಸ್ಥಾನ ಪಡೆದುಕೊಂಡಿದ್ದಾಳೆ.
ರಾಜ್ಯ ಮಟ್ಟದ 17 ವರ್ಷದ ಒಳಗಿನ ಬಾಲಕರ ವಿಭಾಗ ಅಥ್ಲೆಟಿಕ್ನ ಉದ್ದ ಜಿಗಿತದಲ್ಲಿ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ವಿಜಯಮೇರಿ ಶಾಲೆಯ ಕೆ.ಎಸ್ ಗಣೀಶ್ ದ್ವಿತೀಯಸ್ಥಾನ (6.04 ಮೀಟರ್) ಪಡೆದಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಒಟ್ಟಾರೆಯಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಸರ್ಕಾರ ಅಗತ್ಯ ಕ್ರೀಡಾ ಸೌಲಭ್ಯವನ್ನು ಕಲ್ಪಿಸಬೇಕಾಗಿದೆ.