ಮಂಡ್ಯ : ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಪಣ್ಣೆದೊಡ್ಡಿ ಗ್ರಾಮದ ಬಳಿ ನಡೆದಿದೆ.
ಬೈಕ್ ಸವಾರರಿಬ್ಬರು ಕೊಪ್ಪದಿಂದ ಮದ್ದೂರು ಮಾರ್ಗವಾಗಿ ಬರುವ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಬೈಕ್ ಸವಾರರಾದ ವಿನಯ್ (27) ಹಾಗೂ ಪಸನ್ನ (30) ಎಂಬಿಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಓದಿ: ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೇ.. ಹ್ಯಾಟ್ರಿಕ್ ಹೀರೋ ಶಿವಣ್ಣ ಹಾಡಿಗೆ ತಲೆದೂಗಿದ ಮಕ್ಕಳು..
ಡಿಕ್ಕಿ ಹೊಡೆದ ವಾಹನ ಸ್ಥಳದಿಂದ ಪರಾರಿಯಾಗಿದ್ದು, ನಿರ್ಜನ ಪ್ರದೇಶದಲ್ಲಿ ಘಟನೆ ನಡೆದಿದ್ದರಿಂದ ಯಾವ ವಾಹನವೆಂದು ತಿಳಿದು ಬಂದಿಲ್ಲ. ಮದ್ದೂರು ತಾಲೂಕಿನ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ