ಮಂಡ್ಯ: ಇಬ್ಬರು ಸ್ನೇಹಿತರು ವಿದ್ಯುತ್ ಶಾಕ್ಗೆ ಬಲಿಯಾಗಿರುವ ಘಟನೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿಯ ಪುಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಸಂಭವಿಸಿದೆ. ಒಬ್ಬನಿಗೆ ಲೈಟ್ ಕಂಬದ ಬಳಿ ಮೊಬೈಲ್‌ನಲ್ಲಿ ಮಾತನಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ಸಮೀಪದಲ್ಲೇ ಇದ್ದ ಮತ್ತೊಬ್ಬ ಸ್ನೇಹಿತ ಆತನನ್ನು ಕಾಪಾಡಲು ಹೋಗಿ ತಾನೂ ಬಲಿಯಾಗಿದ್ದಾನೆ.
ಇದನ್ನೂ ಓದಿ: ತಮಿಳುನಾಡಿನಲ್ಲಿ ನಾಲ್ಕು ಒಲಿಂಪಿಕ್ ತರಬೇತಿ ಅಕಾಡೆಮಿಗಳ ಸ್ಥಾಪನೆ: ಸಿಎಂ ಸ್ಟಾಲಿನ್
ರಮೇಶ್ (35) ಮನೆ ಮುಂಭಾಗದ ಲೈಟ್ ಕಂಬದ ಬಳಿ ತನ್ನ ಸ್ನೇಹಿತರ ಜೊತೆ ಮೊಬೈಲ್‌ನಲ್ಲಿ ಮಾತನಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ಇವರನ್ನು ರಕ್ಷಣೆ ಮಾಡಲು ಹೋದ ಶಂಕರ್ (25) ಅವರಿಗೂ ಶಾಕ್ ಹೊಡೆದಿದೆ. ತಕ್ಷಣವೇ ಅಕ್ಕಪಕ್ಕದ ಮನೆಯವರು ಹಾಗೂ ಸಂಬಂಧಿಕರು ಇಬ್ಬರನ್ನು ಕೆ.ಎಂ.ದೊಡ್ಡಿಯ ಜಿ.ಮಾದೇಗೌಡ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಆದರೆ, ಮಾರ್ಗಮಧ್ಯೆದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.