ಮಂಡ್ಯ: ಮುಂಬೈ ಮೂಲದವರು ಎನ್ನಲಾದ ಇಬ್ಬರನ್ನು ಆ್ಯಂಬುಲೆನ್ಸ್ ಮೂಲಕ ಕರೆತಂದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಆನಗೋಳ ಚೆಕ್ಪೋಸ್ಟ್ ನಲ್ಲಿ ನಡೆದಿದೆ.
ಮುಂಬೈನಿಂದ ಬಂದಿದ್ದಾರೆ ಎನ್ನಲಾದ ಇಬ್ಬರು ವ್ಯಕ್ತಿಗಳನ್ನು ಚಾಲಕ ಆ್ಯಂಬುಲೆನ್ಸ್ ನಲ್ಲಿ ಕೂರಿಸಿಕೊಂಡು ಸೈರನ್ ಹಾಕಿಕೊಂಡು ಬರುತ್ತಿದ್ದನು. ಚೆಕ್ ಪೋಸ್ಟ್ ಅಧಿಕಾರಿಗಳು ಅನುಮಾನ ಬಂದು ತಡೆದು ಪರಿಶೀಲನೆ ಮಾಡಿದ್ದಾರೆ. ಈ ವೇಳೆ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ಕೆಎ40, ಜಿ-0459 ಸಂಖ್ಯೆಯ ಆ್ಯಂಬುಲೆನ್ಸ್ನಲ್ಲಿ ಕರೆತರುತ್ತಿದ್ದ ಚಾಲಕನನ್ನು ಕ್ವಾರಂಟೈನ್ಗೆ ಒಳಪಡಿಸಿದ್ದಾರೆ ಎನ್ನಲಾಗಿದೆ. ಮುಂಬೈನಿಂದ ಬಂದ ವ್ಯಕ್ತಿಗಳು ಜಿಲ್ಲಾಡಳಿತದಿಂದ ಅನುಮತಿ ಪಡೆದಿದ್ದಾರಾ ಎಂಬ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.