ETV Bharat / state

ರಾಜ್ಯ ಸರ್ಕಾರದ ಎಡವಟ್ಟು: ಮಂಡ್ಯದಲ್ಲಿ ಒಂದು ಹುದ್ದೆಗೆ ಇಬ್ಬರು ಅಧಿಕಾರಿಗಳು - ಡಿಡಿಪಿಯು ಹುದ್ದೆ

ಒಂದು ಡಿಡಿಪಿಯು ಹುದ್ದೆಗೆ ಉಮೇಶ್ ಹಾಗೂ ಮಂಜುನಾಥ್ ಪ್ರಸನ್ನ ಎಂಬ ಇಬ್ಬರು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇದು ಗೊಂದಲದ ಜೊತೆಗೆ ಪೈಪೋಟಿಗೂ ಕಾರಣವಾಗಿದೆ. ಇಬ್ಬರಿಗೂ ಆದೇಶ ಇರುವುದರಿಂದ ಕಚೇರಿಯಲ್ಲಿ ಪ್ರತ್ಯೇಕ ಕುರ್ಚಿಗಳನ್ನು ಹಾಕಿಕೊಂಡು ಕೆಲಸ ಮಾಡುತ್ತಿದ್ದಾರೆ.

Two officers for one post in Mandya
ಮಂಡ್ಯದಲ್ಲಿ ಒಂದು ಹುದ್ದೆಗೆ ಇಬ್ಬರು ಅಧಿಕಾರಿಗಳು
author img

By

Published : Sep 23, 2022, 2:28 PM IST

Updated : Sep 23, 2022, 2:59 PM IST

ಮಂಡ್ಯ: ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇದು ಪೈಪೋಟಿ ಜೊತೆಗೆ ಗೊಂದಲಕ್ಕೆ ಕಾರಣವಾಗಿದೆ. ಇರುವ ಒಂದು ಡಿಡಿಪಿಯು ಹುದ್ದೆಗೆ ಉಮೇಶ್ ಹಾಗೂ ಮಂಜುನಾಥ್ ಪ್ರಸನ್ನ ಎಂಬುವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆ ಕಚೇರಿಯಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದಿಂದಲೇ ಪರಿಹಾರ ಸಿಗಬೇಕಿದ್ದು, ಅಲ್ಲಿಯವರೆಗೂ ಈ ಗೊಂದಲ ಮುಂದುವರಿಯಲಿದೆ.

ಒಂದು ಹುದ್ದೆಗೆ ಇಬ್ಬರು ಅಧಿಕಾರಿಗಳು

ಉಮೇಶ್ ಅವರು ಡಿಡಿಪಿಯು ಹುದ್ದೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಸೆ.5ರಂದು ಇವರನ್ನು ಕೊಪ್ಪಳಕ್ಕೆ ವರ್ಗಾವಣೆ ಮಾಡಲಾಗಿತ್ತು. ತೆರವಾಗಿದ್ದ ಜಾಯುಟ್ಯೂಬ್ ಬೆಂಗಳೂರಿನ ಪಿಯು ಬೋರ್ಡ್‌ ಡಿಡಿ ಮಂಜುನಾಥ ಪ್ರಸನ್ನ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದರನ್ವಯ ಮಂಡ್ಯಕ್ಕೆ ಬಂದು ಅಧಿಕಾರವನ್ನು ಸ್ವೀಕಾರ ಮಾಡಿದ್ದರು.

ಈ ನಡುವೆ ವರ್ಗಾವಣೆ ವಿರುದ್ಧ ಉಮೇಶ್ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಮೆಟ್ಟಿಲೇರಿದ್ದರು. ಎರಡು ವರ್ಷಕ್ಕೆ ಮುನ್ನವೇ ಅಂದರೆ ಅವಧಿ ಪೂರ್ವವೇ ತನ್ನನ್ನು ವರ್ಗಾವಣೆ ಮಾಡಿದ್ದು, ಆದೇಶವನ್ನು ರದ್ದು ಪಡಿಸುವಂತೆ ಮನವಿ ಸಲ್ಲಿಸಿದರು. ಇದನ್ನು ಪುರಸ್ಕರಿಸಿರುವ ಮಂಡಳಿ ಮಂಡ್ಯ ಡಿಡಿ ಹುದ್ದೆಯಲ್ಲಿಯೇ ಮುಂದುವರಿಯುವಂತೆ ಉಮೇಶ್ ಅವರ ಪರವಾಗಿ ಸೆ.19ರಂದು ಆದೇಶ ನೀಡಿದೆ.

ಇದನ್ನೂ ಓದಿ: ರೈತನ ಮಗನಿಗೆ ಒಲಿದ ಕೆಎಎಸ್ ಉನ್ನತ ಹುದ್ದೆ.. ಸಾಧನೆಯ ಹಾದಿ ಬಿಚ್ಚಿಟ್ಟ ಅಶೋಕ

ಈ ಹಿನ್ನೆಲೆ ಅವರು ಕೂಡ ವಾಪಸ್ ಆಗಿದ್ದು, ಇಬ್ಬರಿಗೂ ಆದೇಶ ಇರುವುದರಿಂದ ಕಚೇರಿಯಲ್ಲಿ ಪ್ರತ್ಯೇಕ ಕುರ್ಚಿಗಳನ್ನು ಹಾಕಿಕೊಂಡು ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಮುಂದಿನ ಆದೇಶದ ಬಳಿಕ ಯಾರಿಗೆ ಗೇಟ್‌ಪಾಸ್ ಸಿಗಲಿದೆ ಎನ್ನುವುದನ್ನು ಕಾದು ನೋಡಬೇಕು.

Last Updated : Sep 23, 2022, 2:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.