ETV Bharat / state

ಕೆಎಸ್​ಆರ್​ಟಿಸಿ ಬಸ್-ಕಾರು ಅಪಘಾತ: ಮನ್‌ಮುಲ್ ನಿರ್ದೇಶಕ ಸೇರಿ ಇಬ್ಬರ ಸ್ಥಿತಿ ಗಂಭೀರ - melukote ksrtc bus accident

ಪಾಂಡವಪುರ ತಾಲೂಕಿನ ಮೇಲುಕೋಟೆ ಕಣಿವೆ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಮನ್‌ಮುಲ್ ನಿರ್ದೇಶಕ ಸೇರಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

two-seriously-injured-in-accident-between-car-and-ksrtc-bus
ಕೆಎಸ್​ಆರ್​ಟಿಸಿ ಬಸ್-ಕಾರು ಅಪಘಾತ: ಮನ್‌ಮುಲ್ ನಿರ್ದೇಶಕ ಸೇರಿ ಇಬ್ಬರ ಸ್ಥಿತಿ ಗಂಭೀರ
author img

By

Published : Mar 26, 2022, 10:47 PM IST

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮನ್‌ಮುಲ್ ನಿರ್ದೇಶಕ ಸೇರಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆ ಕಣಿವೆ ಬಳಿ ಶನಿವಾರ ಈ ಅಪಘಾತ ಸಂಭವಿಸಿದೆ.

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ ಒಕ್ಕೂಟ ನಿಯಮಿತ (ಮನ್‌ಮುಲ್) ನಿರ್ದೇಶಕ ಕಾಡೇನಹಳ್ಳಿ ಚಂದ್ರ ಅವರ ಕಾರು ಮತ್ತು ಕೆಎಸ್‌ಆರ್​​ಟಿಸಿ ಬಸ್ ನಡುವೆ ಮೇಲುಕೋಟೆ ಕಣಿವೆ ಬಳಿ ಡಿಕ್ಕಿ ಆಗಿದೆ. ಈ ಅಪಘಾತದಲ್ಲಿ ರಾಮಚಂದ್ರ ಮತ್ತು ಅವರ ಕಾರಿನ ಚಾಲಕ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕಾರು ನಜ್ಜುಗುಜ್ಜಾಗಿದ್ದು, ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ರೈಲಿಗೆ ತಲೆ ಕೊಟ್ಟು ಪ್ರೇಮಿಗಳು ಆತ್ಮಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.