ETV Bharat / state

ಹೊಟ್ಟೆಯಿಂದ ಕೆಳಭಾಗ ಕತ್ತರಿಸಿದ ಇಬ್ಬರು ಮಹಿಳೆಯರ ಶವ ಪತ್ತೆ: ಬೆಚ್ಚಿಬಿದ್ದ ಸಕ್ಕರೆನಾಡಿನ ಜನತೆ - ಬೇಬಿ ಕೆರೆಯ ನಾಲೆಯಲ್ಲಿ ಮಹಿಳೆ ಮೃತದೇಹ ಪತ್ತೆ

ಮಂಡ್ಯ ಜಿಲ್ಲೆಯ ಎರಡು ಕಡೆ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿದ ಇಬ್ಬರು ಮಹಿಳೆಯರ ಮೃತದೇಹಗಳು ಪತ್ತೆಯಾಗಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

two-women-dead-bodies-found-in-mandya
ಹೊಟ್ಟೆಯಿಂದ ಕೆಳಭಾಗ ಕತ್ತರಿಸಿದ ಇಬ್ಬರು ಮಹಿಳೆಯರ ಶವ ಪತ್ತೆ: ಬೆಚ್ಚಿಬಿದ್ದ ಸಕ್ಕರೆನಾಡಿನ ಜನತೆ
author img

By

Published : Jun 8, 2022, 11:34 AM IST

Updated : Jun 8, 2022, 11:53 AM IST

ಮಂಡ್ಯ: ಜಿಲ್ಲೆಯಲ್ಲಿ ಬೆಳಕಿಗೆ ಬಂದ ಪ್ರತ್ಯೇಕ ಪ್ರಕರಣದಲ್ಲಿ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿದ ಇಬ್ಬರು ಮಹಿಳೆಯರ ಮೃತದೇಹಗಳು ಪತ್ತೆಯಾಗಿವೆ. ಮಹಿಳೆಯರ ಭೀಭತ್ಸ ಹತ್ಯೆ ಕಂಡು ಸಕ್ಕರೆನಾಡಿನ ಜನತೆ ಬೆಚ್ಚಿಬಿದ್ದಿದ್ದಾರೆ.

ಮಂಡ್ಯದ ಪಾಂಡವಪುರ ಟೌನ್ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿದ ಇಬ್ಬರು ಮಹಿಳೆಯರ ಮೃತದೇಹಗಳು ಪತ್ತೆಯಾಗಿವೆ. ಪಾಂಡವಪುರ ತಾಲೂಕಿನ ಬೇಬಿ ಕೆರೆ ಹಾಗೂ ಕೆ.ಬೆಟ್ಟಹಳ್ಳಿ ಮಾರ್ಗಮಧ್ಯೆ ಇರುವ ಬೇಬಿ ಕೆರೆಯ ನಾಲೆಯಲ್ಲಿ 30ರಿಂದ 35 ವರ್ಷ ಪ್ರಾಯದ ಮಹಿಳೆಯ ಶವ ಅರ್ಧ ಕತ್ತರಿಸಿದ ರೂಪದಲ್ಲಿ ಪತ್ತೆಯಾಗಿದೆ.

ಮತ್ತೊಂದು ಮಹಿಳೆಯ ಶವ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಅರೆಕೆರೆ ಗ್ರಾಮದ ಬಳಿಯ ಸಿಡಿಎಸ್ ನಾಲೆಯಲ್ಲಿ‌ ತೇಲಿ ಬಂದು ರೈತನ ಜಮೀನಿನಲ್ಲಿ ಸಿಕ್ಕಿದೆ. ಪತ್ತೆಯಾದ ಎರಡೂ ಶವಗಳ ಅರ್ಧಭಾಗವನ್ನು ಕತ್ತರಿಸಿ ಚೀಲದಲ್ಲಿ ಹಾಕಿ, ಎರಡು ಕಾಲುಗಳನ್ನು ಕಟ್ಟಿ ನೀರಿಗೆ ಬಿಸಾಡಲಾಗಿದೆ.

ಮಹಿಳೆಯರ ಶವ ಪತ್ತೆ

ಎರಡು ಕಡೆ ಪ್ರತ್ಯೇಕವಾಗಿ ದೇಹದ ಅರ್ಧಭಾಗ ಪತ್ತೆಯಾಗಿರುವ ಸುದ್ದಿ ತಿಳಿದು ಪಾಂಡವಪುರ ಹಾಗೂ ಅರೆಕೆರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ‌ ನಡೆಸಿದ್ದಾರೆ. ಎರಡೂ ಕಡೆ ಸಿಕ್ಕಿರುವ ಅರ್ಧ ಕತ್ತರಿಸಿದ ಮೃತದೇಹಗಳ ಹೊಟ್ಟೆಯಿಂದ ಕೆಳಗಿನ ಭಾಗ ಮಾತ್ರ ಪತ್ತೆಯಾಗಿದೆ, ಉಳಿದ ಭಾಗ ಇನ್ನೂ ಸಿಕ್ಕಿಲ್ಲ.

ಸಿಕ್ಕಿರುವ ಎರಡೂ ಶವಗಳ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿದ್ದು, ಬೇರೆಲ್ಲೋ ಕೊಲೆ ಮಾಡಿ ಬಳಿಕ ದೇಹ ಕತ್ತರಿಸಿ ಸಾಕ್ಷ್ಯ‌ ನಾಶಕ್ಕೆ ದುಷ್ಕರ್ಮಿಗಳು ಯತ್ನಿಸಿರಬೇಕು ಎಂದು‌ ಪೊಲೀಸರು ಶಂಕಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರು ಮಹಿಳೆಯರ ಬಗ್ಗೆ ಮಾಹಿತಿ ಕಲೆ ಹಾಕಿ‌, ಪ್ರಕರಣ ಬೇಧಿಸಲು ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ.

ಇದನ್ನೂ ಓದಿ: ಮರುಕಳಿಸಿದ ನಿರ್ಭಯಾ ಅತ್ಯಾಚಾರ.. ಬಸ್ಸಿನಲ್ಲೇ ಬಾಲಕಿಗೆ ಸಾರಾಯಿ ಕುಡಿಸಿ ಸಾಮೂಹಿಕ ಅತ್ಯಾಚಾರ!

Last Updated : Jun 8, 2022, 11:53 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.