ಮಂಡ್ಯ: ಜಿಲ್ಲೆಯಲ್ಲಿ ಅನಧಿಕೃತ ಟ್ಯೂಷನ್ಗಳನ್ನು ಕೂಡಲೇ ಬಂದ್ ಮಾಡಬೇಕು ಮತ್ತು ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಮಾಡಿದರೆ ಶಿಸ್ತು ಕ್ರಮ ಜರುಗಿಸುವುದಾಗಿ ಮಂಡ್ಯ ಡಿಡಿಪಿಐ (ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತ ಉಪನಿರ್ದೇಶಕ) ಜವರೇಗೌಡರು ಎಚ್ಚರಿಕೆ ನೀಡಿದ್ದಾರೆ.
ಮಳವಳ್ಳಿ ಟ್ಯೂಷನ್ಗೆ ಹೋದ ಬಾಲಕಿಯ ಮೇಲೆ ಅತ್ಯಾಚಾರ- ಹತ್ಯೆ ಪ್ರಕರಣ ಬೆನ್ನಲ್ಲೇ ಕೊನೆಗೂ ಎಚ್ಚೆತ್ತ ಶಿಕ್ಷಣ ಇಲಾಖೆ ಅನಧಿಕೃತ ಟ್ಯೂಷನ್ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅನುಮತಿ ಪಡೆಯದೆ ಟ್ಯೂಷನ್ ನಡೆಸಿದರೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಡಿಡಿಪಿಐ ಜವರೇಗೌಡ ಸುತ್ತೋಲೆ ಹೊರಡಿಸಿದ್ದಾರೆ.
ಇದನ್ನೂ ಓದಿ: ಮಂಡ್ಯ: ಟ್ಯೂಷನ್ಗೆ ಕರೆದು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ಸಂಪ್ಗೆ ಎಸೆದ ಕಿರಾತಕ
ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸಂಸ್ಥೆಯ ಮೇಲ್ವಿಚಾರಕನಿಂದಲೇ ನಡೆದಿದ್ದ ಪೈಶಾಚಿಕ ಕೃತ್ಯದ ನಂತರ ಬಿಇಓ ನೀಡಿದ ವರದಿ ಆಧರಿಸಿ ಅನಧಿಕೃತವಾಗಿ ನಡೆಯುತ್ತಿದ್ದ ಟ್ಯೂಷನ್ ಸೆಂಟರ್ ರದ್ದು ಮಾಡಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯಾದ್ಯಂತ ಅಕ್ರಮ ಟ್ಯೂಷನ್ ಸೆಂಟರ್ ಪತ್ತೆ ಮಾಡುವಂತೆ ಸೂಚಿಸಲಾಗಿದೆ. ಅನಧಿಕೃತ ಟ್ಯೂಷನ್ ಕಂಡು ಬಂದರೆ ಮತ್ತು ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಮಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು. ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಶಿಕ್ಷಣ ಇಲಾಖೆ ಎಚ್ಚರ ವಹಿಸುತ್ತದೆ ಎಂದು ಡಿಡಿಪಿಐ ಜವರೇಗೌಡ ಹೇಳಿದರು.
ಇದನ್ನೂ ಓದಿ: ಮಳವಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣ: ಶವವಿಟ್ಟು ಪ್ರತಿಭಟನೆ