ಮಂಡ್ಯ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ವಡ್ಡರದೊಡ್ಡಿ ಗ್ರಾಮದ ಬಳಿ ನಡೆದಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣದ ರಾಕೇಶ್(34) ಕೊಲೆಯಾದ ಯುವಕ. ಕಳೆದ ರಾತ್ರಿ ಯುವಕ ವಡ್ಡರದೊಡ್ಡಿ ಬಳಿ ಬೈಕ್‌ನಲ್ಲಿ ಬರುವಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಈ ಸಂಬಂಧ ಕೆಸ್ತೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳಿಗಾಗಿ ಹುಡುಕಾಟ ಆರಂಭ ಮಾಡಿದ್ದಾರೆ.