ETV Bharat / state

Bike Accident: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಯುವಕರ ದುರ್ಮರಣ - ಡಿಕ್ಕಿ ಹೊಡೆದು ಪರಾರಿ

ಕೆ.ಆರ್‌.ಪೇಟೆಯಲ್ಲಿ ನಡೆದ ಘಟನೆಗೆ ಕಾರಣವಾದ ವಾಹನ ಪತ್ತೆ ಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

unknown vehicle collided with bike two died in mandya
ಅಪರಿಚಿತ ವಾಹನ ಬೈಕ್​ಗೆ ಡಿಕ್ಕಿ: ಇಬ್ಬರು ಯುವಕರ ದಾರುಣ ಸಾವು
author img

By

Published : Jun 19, 2023, 4:20 PM IST

ಅಪಘಾತಕ್ಕೆ ಕಾರಣವಾಗಿದ್ದ ರಸ್ತೆಬದಿಯ ಗಿಡಗಂಟಿ ತೆರವು

ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲ್ಲೂಕಿನ ಹಿರೀಕಳಲೆ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಹಿರೀಕಳಲೆ ಗ್ರಾಮದ ಸಂದೇಶ್ (23), ಮತ್ತು ಮರಡಹಳ್ಳಿಯ ಭರತ್ (25) ಮೃತರು. ಇಬ್ಬರು ಯುವಕರು ಎಳನೀರು ವ್ಯಾಪಾರ ಮಾಡಿಕೊಂಡು, ತಮ್ಮ ಮನೆಯ ಸಂಸಾರಕ್ಕೆ ಆಸರೆಯಾಗಿದ್ದರು. ರಾತ್ರಿ ಸುಮಾರು 10 ಗಂಟೆ ಸಮಯದಲ್ಲಿ ಕೆ.ಆರ್. ಪೇಟೆ ಕಡೆಯಿಂದ ಹಿರೀಕಳಲೆ ಊರಿನ ಕಡೆ ಹೋಗುವಾಗ ಅಪಘಾತ ಸಂಭವಿಸಿದೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತಪಡಿಸಿರುವ ಪೊಲೀಸರು, ವಾಹನದ ಪತ್ತೆಗೆ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಘಟನೆ ಕುರಿತು ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆ.ಆರ್. ಪೇಟೆ ಪಟ್ಟಣದಲ್ಲಿ ಶೇ. 50ರಷ್ಟು ಮನೆಗಳಲ್ಲಿ, ಅಂಗಡಿ ಮಳಿಗೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿಕೊಂಡಿದ್ದಾರೆ. ಅಗತ್ಯ ಇರುವ ಕಡೆ ಪರಿಶೀಲನೆ ನಡೆಸಿ, ಅಫಘಾತ ನಡೆಸಿದ ವಾಹನ ಪತ್ತೆ ಹಚ್ಚಬೇಕೆಂದು ಹಿರೀಕಳಲೆ ಹಾಗೂ ಮರಡಹಳ್ಳಿ ಹಾಗೂ ಕೆ.ಆರ್. ಪೇಟೆ ಟೌನ್ ಅಗ್ರಹಾರ ಬಡಾವಣೆ ನಾಗರೀಕರು ಪೊಲೀಸರನ್ನು ಒತ್ತಾಯ ಮಾಡಿದ್ದಾರೆ.

ಅಪಘಾತಕ್ಕೆ ಕಾರಣವಾಗಿದ್ದ ರಸ್ತೆಬದಿಯ ಗಿಡಗಂಟಿ ತೆರವು: ಮೈಸೂರಿನ ಟಿ. ನರಸೀಪುರ ಬಳಿಯ ಕುರುಬೂರು ಬಳಿ, ಭೀಕರ ರಸ್ತೆ ಅಪಘಾತದಲ್ಲಿ 11 ಜನರನ್ನು ಬಲಿ ತೆಗೆದುಕೊಂಡ ಹೆದ್ದಾರಿ ರಸ್ತೆಯ ಅಕ್ಕಪಕ್ಕದಲ್ಲಿ ಬೆಳೆದು ನಿಂತ ಗಿಡಗಂಟಿಗಳನ್ನು ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳು ತೆರವುಗೊಳಿಸುವ ಕಾರ್ಯ ಆರಂಭಿಸಿದ್ದಾರೆ. ಟಿ. ನರಸೀಪುರ ನಗರಕ್ಕೆ ಸಂಪರ್ಕ ಕಲ್ಪಿಸುವ ಮೈಸೂರು, ಚಾಮರಾಜನಗರ, ಮಳವಳ್ಳಿ ಭಾಗದ ರಾಷ್ಟ್ರೀಯ ಹೆದ್ದಾರಿಯ ಅಕ್ಕಪಕ್ಕದಲ್ಲಿ ಬೆಳೆದು ನಿಂತ ಗುಡಮರಗಳಿಂದ ರಸ್ತೆ ತಿರುವಿನಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿತ್ತು.

ಈ ಬಗ್ಗೆ ಸ್ಥಳೀಯರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ರಸ್ತೆಯನ್ನು ಸರಿಯಾಗಿ ನಿರ್ಮಾಣ ಮಾಡದೆ ಅಸಡ್ಡೆ ತೋರಿಸುತ್ತಿದ್ದಾರೆ ಎಂದು ಇತ್ತೀಚೆಗೆ ತಮ್ಮ ಅಕ್ರೋಶ ಹೊರ ಹಾಕಿದ್ದರು. ಇತ್ತೀಚೆಗೆ ಕುರುಬೂರು ಬಳಿ ಖಾಸಗಿ ಬಸ್ ಹಾಗೂ ಇನ್ನೋವಾ ಕಾರುಗಳ ನಡುವೆ ಅಪಘಾತದಲ್ಲಿ ಪ್ರವಾಸಕ್ಕೆ ಬಂದಿದ್ದ 11 ಮಂದಿ ಸಾವನ್ನಪ್ಪಿದ್ದು, ಈ ಬಗ್ಗೆ ಅಪಘಾತ ನಡೆದ ದಿನ ಹೆದ್ದಾರಿ ಅಕ್ಕಪಕ್ಕದಲ್ಲಿ ಬೆಳೆದ ಗಿಡಗಂಟಿಗಳಿಂದ ಈ ಸಂಭವಿಸುತ್ತಿವೆ ಎಂದು ಉಸ್ತುವಾರಿ ಸಚಿವ ಎಚ್ ಸಿ‌. ಮಹಾದೇವಯ್ಯನವರ ಎದುರೇ ಸ್ಥಳೀಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಹೆದ್ದಾರಿ ರಸ್ತೆ ಸರಿಯಾಗಿ ಕಾಣಿಸದೇ ತೊಂದರೆ ಕೊಡುತ್ತಿದ್ದ ಗಿಡಗಂಟಿಗಳನ್ನು ಜೆಸಿಬಿ ನೆರವಿನಿಂದ ತೆರವುಗೊಳಿಸುವ ಕಾರ್ಯ ಆರಂಭಿಸಿದ್ದಾರೆ. ಇದರ ಜೊತೆಗೆ ಅಪಘಾತ ನಡೆಯುವ ಸ್ಥಳದಲ್ಲಿ ರಸ್ತೆ ಸುರಕ್ಷತೆ ಕ್ರಮಗಳನ್ನು ಅನುಸರಿಸಲು ಮುಂದಾಗಿದೆ.

ಇದನ್ನೂ ಓದಿ: ಸ್ನೇಹಿತರ ಜಾಲಿ ರೈಡ್​ಗೆ ಫುಡ್ ಡೆಲಿವರಿ ಬಾಯ್​​ ಬಲಿ.. ಅಪಘಾತ ಎಸಗಿ ಮೃತದೇಹ 100 ಮೀಟರ್​ ಎಳೆದೊಯ್ದರು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.