ಮಂಡ್ಯ: ಜೆಡಿಎಸ್ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿರುವುದು ಹಾಗೂ ಕಾಯ್ದೆ ವಿರುದ್ಧ ಹೋರಾಟಗಾರರ ಬಂಧನ ಖಂಡಿಸಿ ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹೆದ್ದಾರಿ ಬಳಿ ಇರುವ ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಮೆ ಎದುರು ದಲಿತ, ರೈತ ಮತ್ತು ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿ, ಕರ್ನಾಟಕ ಜನಶಕ್ತಿ ಸಂಘಟನೆ ಸದಸ್ಯರು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸಿಎಂ ಯಡಿಯೂರಪ್ಪ ಅವರ ನಡೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.
ಓದಿ: ಮಂಡ್ಯ: ಕಬ್ಬಿನ ಗದ್ದೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಮಣ್ಣಿನ ಮಗ, ರೈತರ ಮಗ, ರೈತರೇ ನನಗೆ ಎಲ್ಲಾ ಎಂದು ಹೇಳಿಕೊಂಡು ಕುಮಾರಸ್ವಾಮಿಯವರು ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು. ಕೂಡಲೇ ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಜೆಡಿಎಸ್ ಕ್ಷಮೆಯಾಚಿಸಬೇಕು. ವಿಧಾನ ಪರಿಷತ್‌ನಲ್ಲಿ ಭೂ ಸುಧಾರಣಾ ಕಾಯ್ದೆ ಅಂಗೀಕರಿಸಲಾಗಿದೆ. ಅಲ್ಲದೇ ರೈತ, ಜನ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಸಲುವಾಗಿ ಅಧಿವೇಶನ ಇಂದು ಮುಗಿಸಲು ಏಕಪಕ್ಷೀಯವಾಗಿ ನಿರ್ಧರಿಸುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.