ETV Bharat / state

ಶ್ರೀರಂಗಪಟ್ಟಣ: ಶಾಸಕ ರವೀಂದ್ರ ಶ್ರೀಕಂಠಯ್ಯಗೆ ಗ್ರಾಮಸ್ಥರಿಂದ ತರಾಟೆ - villagers stopped the MLA car and quarrel with him

ಶ್ರೀರಂಗಪಟ್ಟಣ ತಾಲೂಕಿನ ತಡಗವಾಡಿ ಗ್ರಾಮಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲು ಆಗಮಿಸಿದ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಕೆಲವು ಗ್ರಾಮಸ್ಥರ ನಡುವೆ ವಾಕ್ಸಮರ ನಡೆಯಿತು.

The villagers stopped the MLA car and quarrel with him
ಶಾಸಕ ರವೀಂದ್ರ ಶ್ರೀಕಂಠಯ್ಯ ಕಾರನ್ನು ತಡೆದು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು
author img

By

Published : Dec 6, 2022, 4:26 PM IST

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ತಡಗವಾಡಿ ಗ್ರಾಮಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ತಡಗವಾಡಿ ಗ್ರಾಮದ ಕೆಲವರು ಶಾಸಕರು ಹಲವು ದಿನಗಳ ನಂತರ ಗ್ರಾಮಕ್ಕೆ ಬಂದಿದ್ದಾರೆ. ಇಷ್ಟು ದಿನ ಯಾಕೆ ಬರಲಿಲ್ಲ ಎಂದು ಪ್ರಶ್ನಿಸಿದರು.

ಶಾಸಕ ರವೀಂದ್ರ ಶ್ರೀಕಂಠಯ್ಯ ಅವರಿಗೆ ಗ್ರಾಮಸ್ಥರ ತರಾಟೆ

ಈ ವೇಳೆ ಕೆಲವರ ವರ್ತನೆಯಿಂದ ಕೋಪಗೊಂಡ ರವೀಂದ್ರ ಶ್ರೀಕಂಠಯ್ಯ, ನನಗೆ ಮತ ಹಾಕಲು ಇಷ್ಟವಿದ್ದರೆ ಹಾಕಿ, ಇಲ್ಲದಿದ್ದರೆ ನಿಮ್ಮ ಮತವೇ ನನಗೆ ಬೇಡ ಎಂದು ಏರುದನಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಗ್ರಾಮಸ್ಥರು ಶಾಸಕರನ್ನು ಸಮಾಧಾನಪಡಿಸಿ, ನಮಗೆ ಗ್ರಾಮದ ಅಭಿವೃದ್ಧಿ ವಿಚಾರವೇ ಮುಖ್ಯ. ಈ ರೀತಿ ವಾಕ್ಸಮರ ನಡೆಸುವುದು ಸರಿಯಲ್ಲ ಎಂದು ಹೇಳಿ ಶಾಸಕರನ್ನು ಕರೆದೊಯ್ದರು.

ಇದನ್ನೂ ಓದಿ: ಮಂಡ್ಯ: ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಪೇಜಾವರ ಶ್ರೀ ಭೇಟಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.