ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ರಾಜೇಗೌಡನ ದೊಡ್ಡಿ ಗ್ರಾಮಸ್ಥರು, ಕೊರೊನಾ ನಿಯಂತ್ರಣಕ್ಕಾಗಿ ಮಾರಮ್ಮನ ಮೊರೆ ಹೋಗಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ರಾಜೇಗೌಡನ ದೊಡ್ಡಿ ಗ್ರಾಮದ ಹೊರ ವಲಯದಲ್ಲಿ ಜನರು ಮಾರಮ್ಮ ದೇವಿಗೆ ಕುರಿ, ಕೋಳಿಯನ್ನು ಬಲಿಕೊಟ್ಟು ಪೂಜೆ ಸಲ್ಲಿಸಿದ್ದಾರೆ.
ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದು, ಸಂಕಷ್ಟ ನಿವಾರಣೆಯಾಗಬೇಕು ಎಂದು ಮಾರಮ್ಮನಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.