ಮಂಡ್ಯ: ಜಿಲ್ಲೆಯಲ್ಲಿ ಮತದಾರರ ಪರಿಷ್ಕರಣೆ ಸೆಪ್ಟೆಂಬರ್ 1ರಿಂದ 15ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾಡಳಿತ ಹಾಗೂ ಚುನಾವಣಾ ಆಯೋಗ ವಾಕ್‌ಥಾನ್ ನಡೆಸಿತು.
ಜಿಲ್ಲಾಧಿಕಾರಿ ಕಚೇರಿಯಿಂದ ಮಹಾವೀರ ವೃತ್ತದವರೆಗೂ 2 ಕಿ.ಮೀ ವಾಕ್‌ಥಾನ್ ನಡೆಯಿತು. ಜಿಲ್ಲಾಧಿಕಾರಿ ವೆಂಕಟೇಶ್ ಅವರು ಜಾಥಾಗೆ ಚಾಲನೆ ಕೊಟ್ಟರು. ಜೊತೆಗೆ ಅವರೂ ವಾಕ್‌ಥಾನ್‌ನಲ್ಲಿ ಪಾಲ್ಗೊಂಡು ಕೊನೆವರೆಗೂ ಭಾಗವಹಿಸಿದ್ದರು.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಪಟ್ಟಿಯಲ್ಲಿ ಕೈಬಿಟ್ಟು ಹೋದವರು, ವಿಳಾಸ ಬದಲಾವಣೆ, ಬೇರೆಡೆಗೆ ಮತದಾರರ ಹೆಸರು ವರ್ಗಾಯಿಸಲು ಬಯಸುವವರಿಗೂ ಪರಿಷ್ಕರಣೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಈ ಎಲ್ಲಾ ದೂರುಗಳು ಬಂದ ಹಿನ್ನೆಲೆ ಕ್ರಮ ಕೈಗೊಳ್ಳಲಾಗುತ್ತಿದೆ.