ETV Bharat / state

ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲ್ಲ: ಸಿದ್ದರಾಮಯ್ಯ ಸ್ಪಷ್ಟನೆ - ಮಂಡ್ಯದಲ್ಲಿ ಸಿದ್ದರಾಮಯ್ಯ ಹೇಳಿಕೆ

ಬೇರೆ ಎಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿದಿಲ್ಲ. ಆದರೆ ಚಾಮುಂಡಿ ಕ್ಷೇತ್ರದಿಂದ ಮಾತ್ರ ನಾನು ಸ್ಪರ್ಧಿಸಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಡ್ಯದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : Mar 13, 2022, 4:43 PM IST

Updated : Mar 13, 2022, 4:58 PM IST

ಮಂಡ್ಯ: ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡುವುದಿಲ್ಲ. ಬೇರೆ ಎಲ್ಲಿ ಸ್ಪರ್ಧೆ ಮಾಡುತ್ತೇನೆ ಎಂಬುದು ತಿಳಿದಿಲ್ಲ. ಆದರೆ ಚಾಮುಂಡಿ ಕ್ಷೇತ್ರದಿಂದ ಮಾತ್ರ ನಾನು ಸ್ಪರ್ಧಿಸಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ

ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ಕ್ಷೇತ್ರಗಳಲ್ಲಿ ಚುನಾವಣೆಗೆ ನಿಲ್ಲುವಂತೆ ಒತ್ತಡ ಬರುತ್ತಿದೆ, ಎಲ್ಲಿ ನಿಲ್ಲಬೇಕು ಎಂದು ಇನ್ನೂ ತೀರ್ಮಾನಿಸಿಲ್ಲ. ಆದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಅವಧಿಗೂ ಮುನ್ನ ರಾಜ್ಯದಲ್ಲಿ ಚುನಾವಣೆ ಮಾಡಲಾಗುತ್ತದೆ ಎಂಬ ಸುದ್ದಿಯ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಬಹುಶಃ ನನಗನಿಸುವಂತೆ ಆಗಲ್ಲ. ಅವಧಿಗೆ ಮುನ್ನ ಚುನಾವಣೆ ನಡೆಯುವುದು ಸಂದೇಹ. ಈ ಬಗ್ಗೆ ಸ್ವತಃ ಬಿಜೆಪಿ ನಾಯಕರೇ ಹೇಳಿದ್ದಾರೆ ಎಂದರು.

2023ರ ಏಪ್ರಿಲ್‌ನಲ್ಲಿ ಚುನಾವಣೆ ಇರೋದು. ಅವಧಿಗೂ ಮುನ್ನ ಯಾಕೆ ಚುನಾವಣೆ ಮಾಡ್ತಾರೆ. ಇದೆಲ್ಲ ಊಹಾಪೋಹಗಳಷ್ಟೇ. ಅವಧಿಗೂ ಮುನ್ನ ಚುನಾವಣೆ ಬಂದ್ರೆ ನಾವು ಸಿದ್ಧರಿದ್ದೇವೆ. ಜನರು ನಮ್ಮ ಪರವಾಗಿದ್ದಾರೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Last Updated : Mar 13, 2022, 4:58 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.