ಮಂಡ್ಯ: ಮನೆಗೆ ನುಗ್ಗಿ ಮಹಿಳೆಯ ಕೈಕಾಲು ಕಟ್ಟಿ ಅತ್ಯಾಚಾರ ನಡೆಸಿ, ಬಳಿಕ ಉಸಿರುಕಟ್ಟಿಸಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದ ವಿವಿ ನಗರದಲ್ಲಿ ನಡೆದಿದೆ.
ಸಕ್ಕರೆ ನಾಡು ಮಂಡ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊಲೆ ಸುಲಿಗೆ ಕಳ್ಳತನ ನಡೆಯುತ್ತಿದ್ದವು. ಆದರೀಗ ಜಿಲ್ಲೆಯಲ್ಲಿ ಮಹಿಳೆಯೊಬ್ಬಳನ್ನು ಅತ್ಯಾಚಾರಗೈದು ಬಳಿಕ ದಿಂಬಿನಿಂದ ಉಸಿರುಕಟ್ಟಿಸಿ ಹತ್ಯೆ ಮಾಡಲಾಗಿದ್ದು, ಜಿಲ್ಲೆಯ ಜನ ಬೆಚ್ಚಿ ಬಿದ್ದಿದ್ದಾರೆ. ಜಿಲ್ಲೆಯ ಮದ್ದೂರು ತಾಲೂಕಿನ ಮನೆಯಲ್ಲಿದ್ದ ಮಹಿಳೆಯನ್ನು ಕೈ ಕಾಲು ಕಟ್ಟಿ ಅತ್ಯಾಚಾರ ಮಾಡಿರೋ ದುಷ್ಕರ್ಮಿಗಳು, ಕೊನೆಗೆ ದಿಂಬಿನಿಂದ ಮಹಿಳೆಯ ಉಸಿರುಕಟ್ಟಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಮದ್ದೂರು ಪಟ್ಟಣದ ಮನೆಯೊಂದರಲ್ಲಿ ವಾಸವಾಗಿದ್ದ ಮಹಿಳೆಯನ್ನು ಮಂಚಕ್ಕೆ ಕೈ ಕಾಲು ಕಟ್ಟಿ ಅತ್ಯಾಚಾರ ಮಾಡಿ ದಿಂಬಿನಿಂದ ಉಸಿರು ಕಟ್ಟಿಸಿ ಸಾಯಿಸಿ ಪರಾರಿಯಾಗಿದ್ದಾರೆ. ರಾತ್ರಿ ಮನೆಗೆ ಬಂದಾಗ ಮಗನಿಗೆ ತನ್ನ ತಾಯಿ ಹತ್ಯೆಯಾಗಿರೋದು ತಿಳಿದು ಬಂದಿದೆ. ತಾಯಿ ಹತ್ಯೆಯಿಂದ ತಂದೆ, ಮಗ ಕಂಗಾಲಾಗಿದ್ದು ಭೀತಿಗೊಂಡಿದ್ದಾರೆ.
ಪಟ್ಟಣದಲ್ಲಿ ಮಹಿಳೆಯನ್ನು ರೇಪ್ ಮಾಡಿ ಹತ್ಯೆ ಮಾಡಿರೋ ಸುದ್ದಿ ತಿಳಿದು ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಮನೆಯ ಮುಂದೆ ಜನ ಜಮಾಯಿಸಿ ಆತಂಕದಿಂದಲೇ ಘಟನೆಯ ಬಗ್ಗೆ ಮಾತನಾಡಿಕೊಳ್ಳುತ್ತಿದ್ದರು. ಇನ್ನು ಘಟನೆಯ ಸುದ್ದಿ ತಿಳಿಯುತ್ತಲೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಎಸ್ಪಿ ಕೂಡ ಭೇಟಿ ನೀಡಿ ಪರಿಶೀಲಿಸಿ ನಡೆಸಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಓದಿ : ಮಂಡ್ಯ: ಮನೆಯಲ್ಲಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹತ್ಯೆ!
ಇನ್ನು ಕೊಲೆಯಾದ ಮಹಿಳೆ ಹಣಕಾಸು ವ್ಯವಹಾರ ನಡೆಸ್ತಿರೋ ಹಿನ್ನೆಲೆಯಲ್ಲಿ ಈ ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಘಟನೆಯ ಬಗ್ಗೆ ಕೆಲವೊಂದು ಸಾಕ್ಷ್ಯಗಳು ಸಿಕ್ಕಿದ್ದು, ಆ ಆಧಾರದ ಮೇಲೆ ತನಿಖೆ ನಡೆಸಲು ಶ್ವಾನ ದಳ ಮತ್ತು ಎಫ್.ಎಸ್.ಎಲ್ ತಜ್ಞರನ್ನು ಕರೆಸಲಾಗಿದೆ. ಶೀಘ್ರವೇ ಯಾರು ಈ ಕೃತ್ಯ ಮಾಡಿದ್ದಾರೆ ಅನ್ನೋ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದರು.