ETV Bharat / state

ಮಂಡ್ಯ: ಸೊಸೆ ಜೊತೆಗಿನ ಅಕ್ರಮ ಸಂಬಂಧ ಪ್ರಶ್ನಿಸಿದ ಮಹಿಳೆಯನ್ನ ಕೊಂದ ಅದೇ ಗ್ರಾಮದ ಯುವಕ - woman killed for question illegal affaire

ಸೊಸೆ ಜೊತೆಗಿನ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದ ಮಹಿಳೆಯನ್ನು ಆರೋಪಿ ಕೊಡಲಿಯಿಂದ ತಲೆಗೆ ಹೊಡೆದು ಕೊಂದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ಸಂಭವಿಸಿದೆ.

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕೊಲೆ
ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕೊಲೆ
author img

By

Published : Mar 18, 2021, 3:34 AM IST

ಮಂಡ್ಯ: ಸೊಸೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನಿಗೆ ಬುದ್ದಿವಾದ ಹೇಳಿದ ಮಹಿಳೆಯನ್ನ ಅದೇ ಗ್ರಾಮದ ಯುವಕ ಕೊಡಲಿಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ದೊಡ್ಡತಾಯಮ್ಮ(55) ಕೊಲೆಯಾದ ಮಹಿಳೆ. ಆದೇ ಗ್ರಾಮದ ವಾಸು ಎಂಬಾತ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕೊಲೆ

ಏನಿದು ಘಟನೆ?

ಕೊಲೆ ಆರೋಪಿಯಾಗಿರುವ ವಾಸು ಕೊಲೆಯಾಗಿರುವ ದೊಡ್ಡತಾಯಮ್ಮನ ಸೊಸೆಯೊಂದಿಗೆ ಕಳೆದ ಐದಾರು ತಿಂಗಳಿನಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಅಕ್ಕಪಕ್ಕದ ಜನರಿಂದ ಈ ವಿಷಯ ತಿಳಿದು ಕೊಲೆಯಾದ ಮಹಿಳೆ ಸೋಮವಾರ ರಾತ್ರಿ ವಾಸು ಮನೆಗೆ ಬಂದಿದ್ದೆ ಸಂದರ್ಭದಲ್ಲಿ ಪ್ರಶ್ನೆ ಮಾಡಿದ್ದಲ್ಲದೆ ಬುದ್ದಿ ಹೇಳಿದ್ದಾರೆ. ಜೊತೆಗೆ ಸೊಸೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇದರಿಂದ ಆಕ್ರೋಶಗೊಂಡ ಆರೋಪಿ ವಾಸು ಸ್ಥಳದಲ್ಲೆ ಇದ್ದ ಕೊಡಲಿಯಿಂದ ದೊಡ್ಡ ತಾಯಮ್ಮನ ತಲೆಗೆ ಹೊಡೆದು ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದ ಮಹಿಳೆ ಸ್ಥಳದಲ್ಲೆ ಸಾವನ್ನಿಪ್ಪಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಖುದ್ದು ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆಗೈದ ಆರೋಪಿಗಾಗಿ ಬಲೆ ಬೀಸಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವಸ್ಥಾನಕ್ಕೆ ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಆರು ಜನರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.