ETV Bharat / state

ಮದ್ದೂರು: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಹತ್ಯೆ.. ದೂರು ದಾಖಲು - ಎಳನೀರು ವ್ಯಾಪಾರ

ಯುವಕನನ್ನು ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Maddur Police Station
ಮದ್ದೂರು ಪೊಲೀಸ್ ಠಾಣೆ
author img

By ETV Bharat Karnataka Team

Published : Nov 28, 2023, 8:43 PM IST

ಮಂಡ್ಯ:ಕುತ್ತಿಗೆಗೆ ಹಗ್ಗ ಬಿಗಿದು ಮಾರಕಾಸ್ತ್ರಗಳಿಂದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದ ಮಲ್ಲಯ್ಯ ನಗರದಲ್ಲಿ ನಡೆದಿದೆ. ಗ್ರಾಮದ ಶಿವಾನಂದ (19) ಕೊಲೆಗೀಡಾದ ಯುವಕ.

ಮನೆಯ ಕೊಠಡಿಯಲ್ಲಿ ಮಲಗಿದ್ದ ವೇಳೆ ಕುತ್ತಿಗೆಗೆ ಹಗ್ಗಬಿಗಿದು ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಎಳನೀರು ವ್ಯಾಪಾರ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದ ಶಿವಾನಂದ ಸೋಮವಾರ ರಾತ್ರಿ ಮನೆಯೊಂದರ ಕೊಠಡಿಯಲ್ಲಿ ನಿದ್ರಿಸುತ್ತಿದ್ದ. ಈ ವೇಳೆ, ಮನಗೆ ನುಗ್ಗಿದ ದುಷ್ಕರ್ಮಿಗಳು ಕುತ್ತಿಗೆಗೆ ಹಗ್ಗ ಬಿಗಿದು ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆಗೊಳಿಸಿದ್ದಾರೆ. ನಂತರ ಆತ ಸಾವನ್ನಪ್ಪಿರುವುದನ್ನು ಖಚಿತಪಡಿಸಿಕೊಂಡು ಹೊರ ನಡೆದಿದ್ದಾರೆ. ತಡರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮದ್ದೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ದೂರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಪರಾರಿಯಾಗಿರುವ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರ ವಿಶೇಷ ತಂಡ ರಚನೆ ಮಾಡಿದ್ದಾರೆ.

ಇದನ್ನೂಓದಿ:ಮಗ, ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ ಪತಿ.. ಬೆಚ್ಚಿಬಿದ್ದ ಸೊಲ್ಲಾಪುರ ಮಂದಿ

ಯುವಕ - ಯುವತಿ ಬೈಕ್ ಅಡ್ಡಗಟ್ಟಿ ತರಾಟೆ: ಇಬ್ಬರ ಬಂಧನ( ಮಂಗಳೂರು): ಯುವತಿ ಮತ್ತು ಯುವಕ ಬೈಕ್​ನಲ್ಲಿ ಸಂಚರಿಸುತ್ತಿದ್ದಾಗ ಸಂಘಟನೆಯೊಂದರ ಕಾರ್ಯಕರ್ತರು ತಡೆದು ನೈತಿಕ ಪೊಲೀಸ್‌ಗಿರಿ ನಡೆಸಿರುವ ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಸಂಜೆ ನಡೆದಿತ್ತು. ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆಗೆ ಒಳಪಡಿಸಿದ್ದರು. ಮೋರ್ಗನ್ಸ್ ಗೇಟ್ ಸಮೀಪದ ಮಂಕಿ ಸ್ಟಾಂಡ್‌ನಲ್ಲಿ ಘಟನೆ ವರದಿಯಾಗಿದೆ.

ಪಾಂಡೇಶ್ವರ ಬಳಿಯ ನಿವಾಸಿ ಯುವಕ ಮತ್ತು ಯುವತಿ ಮುಳಿಹಿತ್ಲುವಿನಲ್ಲಿರುವ ಎಂ.ಎಸ್. ಸ್ಪೋರ್ಟ್ಸ್ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದರು. ಅವರು ಮೊಬೈಲ್​ ರಿಪೇರಿ ಮಾಡಿಸಿಕೊಂಡು ಬೈಕ್‌ನಲ್ಲಿ ಹೋಗುತ್ತಿದ್ದರು ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಇಬ್ಬರು ಬೈಕ್​ನಲ್ಲಿ ಬೆನ್ನಟ್ಟಿದ್ದಾರೆ. ಬೈಕ್ ಅಡ್ಡ ಹಾಕಿ ಯುವಕ - ಯುವತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ, ಸ್ಥಳದಲ್ಲಿ ಮತ್ತೊಂದು ಕೋಮಿನ ಯುವಕರು ಜಮಾಯಿಸಿದರು. ಆಗ ಗುಂಪಿನ ನಡುವೆ ಮಾತಿನ ಚಕಮಕಿಯಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿದ್ದಂತೆ ಮಧ್ಯಪ್ರವೇಶಿಸಿದ ಪೊಲೀಸರು ಗುಂಪು ಚದುರಿಸಿದ್ದಾರೆ. ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಪಂ ಉಪಾಧ್ಯಕ್ಷೆ ಪತಿ ಕೊಲೆ: ಗ್ರಾಪಂ ಉಪಾಧ್ಯಕ್ಷೆಯ ಪತಿಯನ್ನು ಮಚ್ಚಿನಿಂದ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿತ್ತು.

ಗುಂಡ್ಲಕೊತ್ತೂರು ಗ್ರಾಪಂ ಉಪಾಧ್ಯಕ್ಷೆ ಗಂಗಾರತ್ನಮ್ಮ ಅವರ ಪತಿ ರಾಮಕೃಷ್ಣಪ್ಪ(56) ಕೊಲೆಯಾದವರು. ತೋಟದ ಮನೆಯಿಂದ ಚೋಳಶೆಟ್ಟಿಹಳ್ಳಿ ಗ್ರಾಮದ ಡೈರಿಗೆ ಹಾಲು ತರಲು ಹೋಗಿದ್ದ ವೇಳೆ ಅಣ್ಣನ ಮಗ ನಾಗರಾಜ್ ಹಲ್ಲೆಗೈದು, ಪರಾರಿಯಾಗಿದ್ದಾನೆ. ತೀವ್ರ ಗಾಯಗೊಂಡಿದ್ದ ರಾಮಕೃಷ್ಣಪ್ಪ ಸ್ಥಳದಲ್ಲೇ ಸಾವಿಗೀಡಾಗಿದ್ದು, ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.