ಮಂಡ್ಯ: ವಿದ್ಯುತ್ ಕಂಬ ಏರಿ ಲೈನ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ನಡೆದಿದೆ.
ಪುಟ್ಟಸಿದ್ದ(30) ಮೃತ ದುರ್ದೈವಿ. ಈತ ವಿದ್ಯುತ್ ಕಂಬದ ಮೇಲೇರಿ ಲೈನ್ ಸರಿಪಡಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.