ಮೈಸೂರು: ಕೊರೊನಾ ಕೆಂಗಣ್ಣು ಜಿಲ್ಲೆಯ ಮೇಲೆ ಬಿದ್ದಿದ್ದು, ಇದೀಗ ಮತ್ತೆ 10 ಮಂದಿಗೆ ಕೊರೊನಾ ಸೋಂಕು ಡೃಢಪಟ್ಟಿದೆ. ಒಟ್ಟು ಪ್ರಕರಣಗಳ ಸಂಖ್ಯೆ 58ಕ್ಕೇರಿರುವುದಾಗಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.
ದಿನೇ-ದಿನೇ ಅಟ್ಟಹಾಸ ಮೆರೆಯುತ್ತಿರುವ ಹೆಮ್ಮಾರಿ ಕೊರೊನಾ ಸೋಂಕು ಸದ್ಯ ಜ್ಯುಬಿಲಿಯಂಟ್ ಕಾರ್ಖಾನೆಯ 9 ನೌಕರರು ಮತ್ತು ಜಿಲ್ಲೆಯ ಓರ್ವ ವ್ಯಕ್ತಿಗೆ ತಗುಲಿದ್ದು, ಅವರೆಲ್ಲಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಜ್ಯುಬಿಲಿಯಂಟ್ ನೌಕರರು ಸೇರಿದಂತೆ ಜಿಲ್ಲೆಯ ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.