ETV Bharat / state

ಬಿಜೆಪಿ ಮತ್ತು ಜೆಡಿಎಸ್​ನಿಂದ 10 ರಿಂದ 15 ಮಂದಿ ಕಾಂಗ್ರೆಸ್​ ಸೇರಲಿದ್ದಾರೆ: ಸಚಿವ ಚಲುವರಾಯಸ್ವಾಮಿ - Former MLA joins Congress party

ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಮೈಸೂರಿನಲ್ಲಿ ಹೇಳಿದ್ದಾರೆ.

minister chaluvaraya swamy
ಸಚಿವ ಚಲುವರಾಯಸ್ವಾಮಿ
author img

By

Published : Aug 18, 2023, 12:41 PM IST

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ

ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವವರ ಹೆಸರನ್ನು ಹೇಳಲು ಸಾಧ್ಯವಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಇಂದು ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಲು ಸಿದ್ಧರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಯಾರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ವಿಚಾರ ಹಾಗೂ ಸೇರುವವರ ಹೆಸರನ್ನು ಈಗ ಹೇಳಲು ಸಾಧ್ಯವಿಲ್ಲ. ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರುವುದು ಖಚಿತ" ಎಂದರು.

ಸುಪ್ರೀಂ ಕೋರ್ಟ್​ನಿಂದ ತಾತ್ಕಾಲಿಕ ತೀರ್ಪು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ ಮತ್ತು ಶಾಸಕರ ಅಸಮಾಧಾನದ ಬಗ್ಗೆ ನಮಗೆ ತಿಳಿದಿದೆ. ನಮ್ಮ ರಾಜ್ಯದವರು ಕೇಂದ್ರದ ಕಮಿಟಿ ಮುಂದೆ ಸಮ್ಮತವಾಗಿ ವಾದ ಮಂಡಿಸಿದ್ದಾರೆ. ಆದರೆ, ತಮಿಳುನಾಡಿನವರು ಸಭೆಯಿಂದ ಹೊರ ನಡೆದಿದ್ದು. ಪ್ರತಿದಿನ 15 ಸಾವಿರ ಕ್ಯೂಸೆಕ್​ ನೀರನ್ನು ಬಿಡುವಂತೆ ಕೇಳಿದ್ದಾರೆ. ಇದಕ್ಕೆ ನಾವು ಒಪ್ಪದ ಕಾರಣ ಅವರು ಸಭೆಯಿಂದ ಹೊರ ನಡೆದಿದ್ದಾರೆ. ಇಂದು ಸುಪ್ರೀಂ ಕೋರ್ಟ್​ನಿಂದ ತಾತ್ಕಾಲಿಕ ತೀರ್ಪು ಬರಲಿದ್ದು, ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ. ರಾಜ್ಯದ ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮ ಬೆಳೆಗಳಿಗೆ 15 ದಿನಗಳಿಗೊಮ್ಮೆ ನೀರು ಬಿಡುತ್ತೇವೆ. ಸದ್ಯಕ್ಕೆ ತಮಿಳುನಾಡಿಗೆ ಕೇಂದ್ರದ ತೀರ್ಮಾನದಂತೆ ನಿತ್ಯವೂ ನೀರು ಹರಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ : S.T.Somashekhar: ಕಾಂಗ್ರೆಸ್ ಸೇರ್ಪಡೆ ಕೇವಲ ವದಂತಿ, ಬಿಜೆಪಿ ಬಿಡುವುದಿಲ್ಲ- ಎಸ್.ಟಿ.ಸೋಮಶೇಖರ್

ಮಳೆ ಕೊರತೆ : ಜೂನ್ ಮತ್ತು ಆಗಸ್ಟ್​ನಲ್ಲಿ ಮಳೆ ಕೊರತೆ ಆಗಿದ್ದು, ರಾಜ್ಯದಲ್ಲಿ ಬರ ಘೋಷಣೆ ಮಾಡುವ ಬಗ್ಗೆ ಸಭೆ ನಡೆಸುತ್ತೇವೆ. ಶೇ. 60 ರಷ್ಟು ಬರ ಇದ್ದರೆ ಮಾತ್ರ ಕೇಂದ್ರ ಅನುದಾನ ಬಿಡುಗಡೆ ಮಾಡುತ್ತದೆ. ಇದನ್ನು ಶೇ. 30ಕ್ಕೆ ಇಳಿಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಕೇಂದ್ರದಿಂದ ಉತ್ತರ ಬಂದಿಲ್ಲ ಹಾಗೂ ವಿಶೇಷ ಅನುದಾನಕ್ಕೆ ಕೇಂದ್ರಕ್ಕೆ ಮನವಿ ಮಾಡಿಲ್ಲ. ಬರ ಹಾಗೂ ನೀರಿನ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳ ಬಳಿ ವರದಿ ಕೇಳಿದ್ದೇವೆ. ಆನಂತರ ಪರಿಸ್ಥಿತಿ ನೋಡಿ ಬರ ಘೋಷಣೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.

ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ : ಗುತ್ತಿಗೆದಾರರಿಂದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಕೇಳುತ್ತಿದ್ದಂತೆ ಅಯ್ಯೋ ಬಿಡಪ್ಪ ಕೆಲಸ ಇಲ್ಲದವರು ಏನೇನೋ ಮಾತನಾಡುತ್ತಾರೆ. ಹಿಂದಿನ ಸರ್ಕಾರದವರು ಒಂದು ವರ್ಷ ಪೇಮೆಂಟ್ ಕೊಟ್ಟಿರಲಿಲ್ಲ. ನಾವು ಬಂದು ಎರಡು ತಿಂಗಳಾಯಿತು. ಈಗಲೇ ಅಷ್ಟು ಅನುದಾನ ಕೊಡಲು ಆಗುವುದಿಲ್ಲ. ಕೆಲವರು ಬಾಯಿ ಚಪಲಕ್ಕೆ ಏನೇನೋ ಮಾತನಾಡುತ್ತಾರೆ, ಅವರಿಗೆಲ್ಲ ಉತ್ತರ ಕೊಡಲು ಆಗುವುದಿಲ್ಲ. ಇನ್ನು ಮುಂದೆ ಕುಮಾರಸ್ವಾಮಿ ಸೇರಿದಂತೆ ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಯಾರ ಹೇಳಿಕೆಯ ಕುರಿತು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.