ETV Bharat / state

ಶಿವರಾತ್ರಿ ರಾಜೇಂದ್ರ ಶ್ರೀಗಳ 105ನೇ ಜಯಂತ್ಯುತ್ಸವ ಉದ್ಘಾಟಿಸಿದ ರಾಜನಾಥ್ ಸಿಂಗ್

author img

By

Published : Aug 29, 2020, 4:40 PM IST

ಇದೇ ಮೊದಲ ಬಾರಿಗೆ ಆನ್​​ಲೈನ್ ಮಾಧ್ಯಮದ ಮೂಲಕ ಶಿವರಾತ್ರಿ ರಾಜೇಂದ್ರ ಶ್ರೀಗಳ ಜಯಂತ್ಯುತ್ಸವ ನಡೆಯಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

105th Anniversary of Shivaratri Rajendra Shri
ಶಿವರಾತ್ರಿ ರಾಜೇಂದ್ರ ಶ್ರೀಗಳ 105 ನೇ ಜಯಂತೋತ್ಸವ

ಮೈಸೂರು: ಇಂದು ಮೈಸೂರಿನ‌ ಸುತ್ತೂರು ಮಠದಲ್ಲಿ ನಡೆದ ಶಿವರಾತ್ರಿ ರಾಜೇಂದ್ರ ಶ್ರೀಗಳ 105 ನೇ ಜಯಂತ್ಯುತ್ಸವವನ್ನು, ಕೊರೊನಾ ಹಿನ್ನೆಲೆಯಲ್ಲಿ ಆನ್‌ಲೈನ್ ಮೂಲಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಶ್ರೀಗಳ ಕೊಡುಗೆ ಸ್ಮರಿಸಿದರು.

ಶ್ರೀಗಳ ಅನಿಮೇಷನ್‌ ಚಿತ್ರ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಶ್ರೀಗಳ ಜಯಂತ್ಯುತ್ಸವದಲ್ಲಿ ಪಾಲ್ಗೊಂಡಿರುವುದು ನನಗೆ ಸಂತೋಷ ತಂದಿದೆ. ಶ್ರೀಗಳು ತಮ್ಮ‌ ಬದುಕನ್ನು ಮಾನವ ಉದ್ಧಾರಕ್ಕಾಗಿ ಮುಡುಪಾಗಿಟ್ಟಿದ್ದರು. ಇಂಥವರ ಜೀವನ ಮೌಲ್ಯವನ್ನು ಬಿಂಬಿಸುವ ಅನಿಮೇಷನ್‌ ಚಿತ್ರವನ್ನು ಬಿಡುಗಡೆಗೊಳಿಸಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದರು.

ಶಿವರಾತ್ರಿ ರಾಜೇಂದ್ರ ಶ್ರೀಗಳ 105 ನೇ ಜಯಂತ್ಯುತ್ಸವ

ಈ ಆನ್​​​ಲೈನ್ ಕಾರ್ಯಕ್ರಮದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಭಾಗವಹಿಸಿದ್ದರು. ಇನ್ನು ಸುತ್ತೂರು ಮಠದ ಶ್ರೀಗಳಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.