ಮೈಸೂರು: ಜಿಲ್ಲೆಯಲ್ಲಿ ಇಂದು 337 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 22638 ಕ್ಕೇರಿದೆ. ಕೊರೊನಾದಿಂದ ಗುಣಮುಖರಾದ 739 ಸೋಂಕಿತರು ವಿವಿಧ ಆಸ್ಪತ್ರೆಗಳಿಂದ ಇಂದು ಬಿಡುಗಡೆಯಾಗಿದ್ದಾರೆ.
ಇನ್ನು ಇಂದು 11 ಮಂದಿ ಕೊರೊನಾಗೆ ಬಲಿಯಾಗಿದ್ದು ಮೃತರ ಸಂಖ್ಯೆ 523 ಕ್ಕೇರಿದೆ. ಜಿಲ್ಲೆಯಲ್ಲಿ ಒಟ್ಟು ಈವರೆಗಿನ 22638 ಕೊರೊನಾ ಪ್ರಕರಣಗಳ ಪೈಕಿ 15434 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 6681 ಸಕ್ರಿಯ ಪ್ರಕರಣಗಳಿವೆ.