ETV Bharat / state

ಕಲುಷಿತ ನೀರು ಕುಡಿದು 11 ಜನ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ತಿ.ನರಸೀಪುರ ತಾಲೂಕಿನ ಕರೋಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 11 ಜನ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Mysure
Mysure
author img

By

Published : Jun 27, 2020, 10:29 AM IST

ಮೈಸೂರು: ಕಲುಷಿತ ನೀರು ಕುಡಿದು 11 ಜನ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಿ.ನರಸೀಪುರ ತಾಲೂಕಿನ ಕರೋಹಟ್ಟಿ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕರೋಹಟ್ಟಿ ಗ್ರಾಮದ ನೀರಿನ ಟ್ಯಾಂಕ್ ಸ್ವಚ್ಛಗೊಳಿಸದೇ ಕಲುಷಿತ ನೀರನ್ನೇ ಪೂರೈಸಿದ ಹಿನ್ನೆಲೆಯಲ್ಲಿ, ಜನರು ಕಲುಷಿತ ನೀರನ್ನು ಕುಡಿದು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.

ಗ್ರಾಮಸ್ಥರು ಹಲವು ಬಾರಿ ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಿ, ಶುದ್ಧ ನೀರು ಪೂರೈಸುವಂತೆ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು. ಆದರೆ, ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಇನ್ನು ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ 11 ಜನರನ್ನು ತಕ್ಷಣ ತಾಲೂಕು ಆಸ್ಪತ್ರೆಗೆ ಹಾಗೂ ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.