ಮೈಸೂರು: ಮೈಸೂರಿನಲ್ಲಿಂದು 139 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 46,844ಕ್ಕೆ ಏರಿಕೆಯಾಗಿದೆ.
ಕೊರೊನಾದಿಂದ ಗುಣಮುಖರಾದ 410 ಮಂದಿ ವಿವಿಧ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 43,738 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 2,157 ಸಕ್ರಿಯ ಪ್ರಕರಣಗಳಿವೆ. ಇಂದು ಇಬ್ಬರು ಮೃತಪಟ್ಟಿದ್ದು, ಈ ವರೆಗೂ 949 ಸಾವನ್ನಪ್ಪಿದ್ದಾರೆ.