ಮೈಸೂರು: ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 2.40 ಕೋಟಿ ರೂ. ಹಣ ಹಾಗೂ 194 ಗ್ರಾಂ 800 ಮಿಲಿ ಗ್ರಾಂ ಚಿನ್ನ, 5 ಕೆಜಿ 50 ಗ್ರಾಂ ಬೆಳ್ಳಿ, 31 ವಿದೇಶಿ ಕರೆನ್ಸಿ ನಂಜುಂಡೇಶ್ವರನಿಗೆ ಕಾಣಿಕೆಯಾಗಿ ಬಂದಿದೆ.
ದೇವಾಲಯದ ದಾಸೋಹ ಭವನದಲ್ಲಿ ನಡೆದ 26 ಹುಂಡಿಗಳ ಎಣಿಕೆ ಕಾರ್ಯದಲ್ಲಿ 2,40,96,139 ರೂ. ಹಣ, ಚಿನ್ನ, ಬೆಳ್ಳಿ ಸಂಗ್ರಹವಾಗಿದೆ. ಶ್ರೀ ನಂಜುಂಡೇಶ್ವರ ಸ್ವಾಮಿ ಚಿಕ್ಕ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿದ ಪರಿಣಾಮ ಈ ಬಾರಿ ಎರಡು ಕೋಟಿಗೂ ಹೆಚ್ಚು ಆದಾಯ ದಾಟಿದೆ. ಹುಂಡಿ ಎಣಿಕೆ ಕಾರ್ಯದಲ್ಲಿ ಸ್ವಸಹಾಯ ಸಂಘದ ಮಹಿಳೆಯರು ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.
ಇದನ್ನೂ ಓದಿ: 36 ದಿನಗಳಲ್ಲೇ ಮಲೆಮಹದೇಶ್ವರನಿಗೆ ಹರಿದುಬಂತು ಕೋಟ್ಯಂತರ ಕಾಣಿಕೆ