ಮೈಸೂರು: ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಎರಡು ಪ್ರಕರಣ ಸೇರಿಸಿದರೆ ಮೈಸೂರು ಜಿಲ್ಲೆಯಲ್ಲಿ ಈವರೆಗೆ 16 ಜನರಿಗೆ ಕೋವಿಡ್-19 ಸೋಂಕು ತಗುಲಿದಂತಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಜುಬಿಲೆಂಟ್ ಕಾರ್ಖಾನೆಯ ಇಬ್ಬರು ನೌಕರರಿಗೆ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಪತ್ತೆಯಾದ 16 ಪಾಸಿಟಿವ್ ಪ್ರಕರಣಗಳ ಪೈಕಿ 14 ಜನ ನಂಜನಗೂಡಿನ ಕಾರ್ಖಾನೆಯಲ್ಲಿ ಕೆಲಸ ಮಾಡುವವರೇ ಆಗಿದ್ದು ಅಚ್ಚರಿ ಮೂಡಿಸಿದೆ.
ಕೊರೊನಾ ಸೋಂಕಿತ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್, ಇಂದು ಕೋವಿಡ್-19 ಪತ್ತೆಯಾದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.