ಮೈಸೂರು: ಇಂದು ಜಿಲ್ಲೆಯಲ್ಲಿ 564 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿದ್ದು , 200 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ಪ್ರಕರಣಗಳ ವಿವರ:
ಇಂದು ಕಂಡ ಬಂದಿರುವ 564 ಸೋಂಕಿತ ಪ್ರಕರಣಗಳು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 34,518 ಕ್ಕೆ ಏರಿಕೆಯಾಗಿದೆ.
ಗುಣಮುಖ:
ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 200 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 26,671 ಮಂದಿ ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 7,110 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರ ಮಾಹಿತಿ :
ಈ ದಿನ ಜಿಲ್ಲೆಯಲ್ಲಿ ಕೊರೊನಾದಿಂದ 6 ಜನ ಮೃತಪಟ್ಟಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 737 ಆಗಿದೆ.