ಮೈಸೂರು: ಇಂದು ಮೈಸೂರು ಜಿಲ್ಲೆಯಲ್ಲಿ 238 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 11 ಜನರು ಮೃತಪಟ್ಟಿದ್ದು, 647 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಒಟ್ಟು 7,923 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 4,113 ಜನರು ಗುಣಮುಖರಾಗಿ, ಆಸ್ಪತ್ರೆಯಿಂದ ವಾಪಸ್ ಆಗಿದ್ದರೆ. 3,559 ಸೋಂಕಿತರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಲ್ಲಿಯವರೆಗೆ ಒಟ್ಟು 235 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚು, ಹೆಚ್ಚು ಕೋವಿಡ್ ಟೆಸ್ಟ್ಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.