ಮೈಸೂರು: ಜಿಲ್ಲೆಯಲ್ಲಿಂದು 253 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 12,304ಕ್ಕೆ ತಲುಪಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 253 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು 12,304 ಸೋಂಕಿತರ ಪೈಕಿ ಈವರೆಗೆ 7,302 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 320 ಮಂದಿ ಮೃತಪಟ್ಟಿದ್ದಾರೆ.
ಸದ್ಯ 4,682 ಸೋಂಕಿತರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರು ಹಾಗೂ ಮೃತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹೆಚ್ಚು-ಹೆಚ್ಚು ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.