ಮೈಸೂರು: ಇಂದು ಜಿಲ್ಲೆಯಲ್ಲಿ 261 ಕೊರೋನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿದ್ದು 11 ಜನ ಸಾವನ್ನಪ್ಪಿದ್ದಾರೆ. ಇಂದು 112 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ 261 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 11 ಜನ ಸಾವನ್ನಪ್ಪಿದಾರೆ. ಜೊತೆಗೆ 112 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು ಸೋಂಕಿತ ಪ್ರಕರಣಗಳು 6,115 ಆಗಿದ್ದು ಅದರಲ್ಲಿ 2,342 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, 3,579 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಲ್ಲಿಯವರೆಗೆ ಒಟ್ಟು 194 ಮಂದಿ ಜಿಲ್ಲೆಯಲ್ಲಿ ಮರಣ ಹೊಂದಿದ್ದಾರೆ.
ಸರಾಸರಿ ಸಾವಿನ ಪ್ರಮಾಣದಲ್ಲಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, ಒಟ್ಟು ಸಾವಿನ ಸಂಖ್ಯೆಯಲ್ಲಿ ರಾಜ್ಯದಲ್ಲಿ 2 ನೇ ಸ್ಥಾನದಲ್ಲಿದೆ. ಇನ್ನು ಪ್ರತಿದಿನ ಕೊರೊನಾ ಟೆಸ್ಟ್ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡಲಾಗುತ್ತಿದ್ದು , ಇದರಿಂದ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಜೊತೆಗೆ ಕೋವಿಡ್ ಬಂದ ನಂತರ ನಿರ್ಲಕ್ಷ್ಯವಹಿಸಿ ಇತರ ರೋಗಗಳಿಂದ ಬಳಲುತ್ತಿರುವ ವ್ಯಕ್ತಿಗಳಿಂದ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಸಾವಿನ ಪ್ರಮಾಣವನ್ನು ಕಡಿಮೆ ಮಾಡುವ ದೃಷ್ಟಿಯಿಂದ ಕೋವಿಡ್ ಟೆಸ್ಟ್ಗಳನ್ನು ಇನ್ನಷ್ಟು ಅಧಿಕಗೊಳಿಸಲು ಕ್ರಮ ಜರುಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.