ಮೈಸೂರು: ಕಬಿನಿ ಜಲಾಶಯದ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಪಾತ್ರಕ್ಕೆ ಬಿಡಲಾಗಿದ್ದು, ಜನರು ಸುರಕ್ಷತಾ ಸ್ಥಳಗಳಿಗೆ ತೆರಳುವಂತೆ ತಿಳಿಸಲಾಗಿದೆ.
ಕಳೆದ 2 ದಿನಗಳಿಂದ ಕೇರಳದ ವೈನಾಡು ಹಾಗೂ ಕಬಿನಿ ಜಲಾಶಯದ ಪ್ರದೇಶಗಳಲ್ಲಿ ಬಿರುಸಿನ ಮಳೆಯಾಗುತ್ತಿರುವುರಿಂದ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಬರುತ್ತಿದೆ. ಇದರಿಂದ ಕಬಿನಿ ಜಲಾಶಯದಿಂದ ಬೆಳಗ್ಗೆ 13,000 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಸಂಜೆ 6 ಗಂಟೆ ನಂತರ 30,000 ಕ್ಯೂಸೆಕ್ ನೀರನ್ನು ನದಿಪಾತ್ರಕ್ಕೆ ಬಿಡಲಾಗಿದ್ದು, ನದಿಪಾತ್ರದ ಜನರು ಸುರಕ್ಷತೆಯಿಂದ ಇರಬೇಕೆಂದು ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರಾದ ಸುಜಾತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.