ಮೈಸೂರು: ಜಿಲ್ಲೆಯಲ್ಲಿ ಇಂದು 303 ಹೊಸ ಕೊರೊನಾ ಪ್ರಕರಣಗಳು ಪತ್ತೆ ಆಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 43,733ಕ್ಕೆ ಏರಿಕೆಯಾಗಿದೆ. ಇದೇ ದಿನ 116 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಜಿಲ್ಲೆಯಾದ್ಯಂತ ಒಟ್ಟು 43,733 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಈವರೆಗೆ 35,844 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ. 6,980 ಸೋಂಕಿತರು ಜಿಲ್ಲೆಯ ನಾನಾ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 909ಕ್ಕೆ ಏರಿದೆ.