ಮೈಸೂರು: ಮಹಾಮಾರಿ ಕೊರೊನಾ ಸೋಂಕಿಗೆ ಜಿಲ್ಲೆಯ 11 ಮಂದಿ ಕೊನೆಯುಸಿರೆಳೆದಿದ್ದಾರೆ. ಅಲ್ಲದೇ 309 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.
ಈ ಮೂಲಕ ಸೋಂಕಿತರ ಸಂಖ್ಯೆ 16,810ಕ್ಕೆ ಏರಿಕೆಯಾಗಿದೆ. 546 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಈವರೆಗೆ ಒಟ್ಟು 12,130 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ.
ಇಲ್ಲಿಯವರೆಗೆ ಸೋಂಕಿಗೆ 427 ಮಂದಿ ಮೃತಪಟ್ಟಿದ್ದು, ಸದ್ಯ 4,253 ಸೋಂಕಿತರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.