ಮೈಸೂರು: ಒಂದೇ ಗ್ರಾಮದ 32 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ, ಆ ಗ್ರಾಮವನ್ನು ಕಂಟೈನ್ಮೆಂಟ್ ಎಂದು ಘೋಷಿಸಿ, ಸೀಲ್ಡೌನ್ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 32 ಮಂದಿಗೆ ಹಾಗೂ ಗ್ರಾಮದ ಸಮೀಪ ಇರುವ ಹೊಸ ಬಡಾವಣೆಯಲ್ಲಿ 15 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳ ಆದೇಶದ ಮೇರೆಗೆ ಗ್ರಾಮವನ್ನು ಕಂಟೈನ್ಮೆಂಟ್ ಹಾಗೂ ಸೀಲ್ಡೌನ್ ಮಾಡಲಾಗಿದೆ.
ಕೆಲವು ಕೊರೊನಾ ಸೋಂಕಿತರನ್ನು ಮನೆಯಲ್ಲೇ ಹೋಂ ಕ್ವಾರಂಟೈನ್ ಮಾಡಲಾಗಿದೆ. ಗ್ರಾಮದ ಬಡಾವಣೆಗಳಿಗೆ ಸಿಬ್ಬಂದಿ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ.