ETV Bharat / state

ಮೈಸೂರಲ್ಲಿ ಇಂದು 357 ಕೊರೊನಾ ಪ್ರಕರಣಗಳು ಪತ್ತೆ: 6 ಸಾವು - ಮೈಸೂರು

ಇಂದು ಮೈಸೂರು ಜಿಲ್ಲೆಯಲ್ಲಿ 357 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿವೆ.

Mysore
ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್
author img

By

Published : Aug 18, 2020, 11:36 PM IST

ಮೈಸೂರು: ಇಂದು ಜಿಲ್ಲೆಯಲ್ಲಿ 357 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 6 ಜನ ಸಾವನ್ನಪ್ಪಿದ್ದಾರೆ. 298 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 357 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 6 ಜನ ಸಾವನ್ನಪ್ಪಿದಾರೆ. ಜೊತೆಗೆ 298 ಜನ ಸೋಂಕಿತ ವ್ಯಕ್ತಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ದಿನದಿಂದ ದಿನಕ್ಕೆ ಗುಣಮುಖರಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ 11,489 ಒಟ್ಟು ಸೋಂಕಿತ ಪ್ರಕರಣಗಳು ಆಗಿದ್ದು, ಅದರಲ್ಲಿ 7,062 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 4,112 ಮಂದಿ ಜನ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಲ್ಲಿಯವರೆಗೆ ಒಟ್ಟು 315 ಮಂದಿ ಜಿಲ್ಲೆಯಲ್ಲಿ ಮರಣ ಹೊಂದಿದ್ದಾರೆ.

ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್​ಗಳನ್ನು ಮಾಡಲಾಗುತ್ತಿದೆ. ಜೊತೆಗೆ ಆಸ್ಪತ್ರೆಯಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.