ಮೈಸೂರು: ಗುಜರಾತಿನ ಅಹಮದಾಬಾದ್ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮೈಸೂರಿನ ಯೋಗಪಟು ಖುಷಿ ಹೆಚ್ ಅವರು ಯೋಗಾಸನ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.
36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮೊದಲನೇ ಬಾರಿಗೆ ಯೋಗಾಸನ ಕ್ರೀಡೆಯು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಸೇರ್ಪಡೆಯಾಗಿರುವುದು ವಿಶೇಷ. ಇದರಲ್ಲಿ ಮೈಸೂರಿನ ಯುವತಿ ಖುಷಿ ಅವರು ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕ ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಗೆದಿದ್ದಾರೆ.
ಖುಷಿ ಅವರು ಮೈಸೂರಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾನಿಲಯ ಮತ್ತು ಆಸ್ಪತ್ರೆಯ ವಿದ್ಯಾರ್ಥಿನಿ. ಮೈಸೂರಿನ ವಿವೇಕಾನಂದ ಯೋಗ ಮತ್ತು ಸಂಶೋಧನ ಕೇಂದ್ರದಲ್ಲಿ ಕಳೆದ 8 ವರ್ಷಗಳಿಂದ ಡಾ. ಪಿ.ಎನ್ ಗಣೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಯೋಗ ತರಬೇತಿ ಪಡೆಯುತ್ತಿದ್ದು, ತಮ್ಮ ಯೋಗ ಕಲೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ.
ಯೋಗ ಕ್ಷೇತ್ರದಲ್ಲಿ ಸಂಶೋಧನೆ ಮಾಡಿ ಉತ್ತಮ ಯೋಗ ಶಿಕ್ಷಕಿ ಆಗುವುದು ನನ್ನ ಗುರಿಯಾಗಿದೆ ಎಂದು ಖುಷಿ ಹೆಚ್ 'ಈಟಿವಿ ಭಾರತ'ಕ್ಕೆ ಮಾಹಿತಿ ನೀಡಿದರು. ಇತ್ತೀಚಿಗೆ ಗುಜರಾತಿನ ಅಹಮದಾಬಾದ್ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡ ಒಂದು ಚಿನ್ನ, ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಸೇರಿ ಒಟ್ಟು 5 ಪದಕಗಳನ್ನು ಗೆದಿದ್ದೆ.
ಇದನ್ನೂ ಓದಿ: ಗುಜರಾತ್ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮಲ್ಲಗಂಬ, ಯೋಗಾಸನಕ್ಕೆ ಸ್ಥಾನ