ETV Bharat / state

ವಿಚ್ಛೇದನ ಬಯಸಿ ಕೋರ್ಟ್ ಮೊರೆ ಹೋಗಿದ್ದ 38 ಜೋಡಿಗಳ ಬಾಳಲ್ಲಿ ಮತ್ತೆ ವಸಂತಗೀತೆ

ರಾಷ್ಟ್ರೀಯ ಲೋಕ ಅದಾಲತ್​ನಲ್ಲಿ ಮೈಸೂರು ನಗರ ಮತ್ತು ತಾಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು ಬಾಕಿಯಿದ್ದ 1,50,633 ಪ್ರಕರಣಗಳಲ್ಲಿ 70,281 ರಾಜಿಯಾಗಬಲ್ಲ ಪ್ರಕರಣಗಳೆಂದು ಗುರುತಿಸಲಾಗಿತ್ತು. ಅವುಗಳಲ್ಲಿ ಇಲ್ಲಿಯವರೆಗೆ 52,695 ಪ್ರಕರಣಗಳ ರಾಜಿ ಸಂಧಾನಕ್ಕೆ ಕ್ರಮ ಕೈಗೊಳ್ಳಲಾಗಿತ್ತು.

38-couple-who-wanted-divorce-reunited-in-court
ವಿಚ್ಛೇದನ ಬಯಸಿ ಕೋರ್ಟ್ ಮೊರೆ ಹೋಗಿದ್ದ 38 ಜೋಡಿ​ ಮರಳಿ ಒಂದಾದರು
author img

By

Published : Jun 25, 2022, 10:46 PM IST

ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಅವರ ನಿರ್ದೇಶನದಂತೆ ನಡೆದ ರಾಷ್ಟ್ರೀಯ ಲೋಕ ಅದಾಲತ್​ನಲ್ಲಿ ಒಟ್ಟು 38 ದಂಪತಿ ತಮ್ಮ ನಡುವಿನ ಕಲಹ ಮರೆತು ಮತ್ತೆ ಜೊತೆಯಾಗಿ ಬಾಳುವ ವಾಗ್ದಾನ ಮಾಡಿದ್ದಾರೆ. ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಕಕ್ಷಿದಾರರು ಮತ್ತು ಜನ ಸಾಮಾನ್ಯರಿಗೆ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಿಕೊಳ್ಳಲು ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇವರು ಮತ್ತೆ ಒಂದಾಗಿದ್ದಾರೆ.

ಮೈಸೂರು ನಗರ ಮತ್ತು ತಾಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು ಬಾಕಿಯಿದ್ದ 1,50,633 ಪ್ರಕರಣಗಳಲ್ಲಿ 70,281 ರಾಜಿಯಾಗಬಲ್ಲ ಪ್ರಕರಣಗಳೆಂದು ಗುರುತಿಸಲಾಗಿತ್ತು. ಅವುಗಳಲ್ಲಿ ಇಲ್ಲಿಯವರೆಗೆ 52,695 ಪ್ರಕರಣಗಳ ರಾಜಿ ಸಂಧಾನಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಇದರಲ್ಲಿ 38,385 ಪ್ರಕರಣಗಳ ಹಾಗೂ 37,177 ವ್ಯಾಜ್ಯ ಪೂರ್ವ ಪ್ರಕರಣ ಸೇರಿ ಒಟ್ಟೂ 75,562 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

​ಈ ಬಾರಿ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಕೌಟುಂಬಿಕ ಕಲಹದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ಮೈಸೂರು ತಾಲೂಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು 38 ದಂಪತಿಗಳು ಕಲಹ ಮರೆತು ಜೊತೆಯಾಗಿ ಬಾಳ್ವೆ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೆ ಈ ಬಾರಿ ವಿಶೇಷವಾಗಿ ಸಂಚಾರ ಉಲ್ಲಂಘನೆ (Challan) ಸಂಬಂಧ ಕೇವಲ ನಾಲ್ಕು ದಿನಗಳಲ್ಲಿ 6,888 ಪ್ರಕರಣಗಳು ವಿಲೇವಾರಿಯಾಗಿದ್ದು, ಇದರಲ್ಲಿ 47,86,100 ರೂ. ವಸೂಲಿ ಮಾಡಲಾಗಿದೆ.

​ಮೆಗಾ ಲೋಕ್ ಅದಾಲತ್‌ನಲ್ಲಿ ತೀರ್ಮಾನವಾದ ಪ್ರಕರಣಗಳಲ್ಲಿ ಇಲ್ಲಿಯವರೆಗೆ ಒಟ್ಟು 53,59,50,487 ರೂ.ಗಳನ್ನು ಪರಿಹಾರ ನೀಡಲು ಆದೇಶಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್. ರಘುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ವಿಚ್ಛೇದನ ಬಯಸಿ ಕೋರ್ಟ್​ ಮೆಟ್ಟಿಲೇರಿದ್ದ ದಂಪತಿ ಮತ್ತೆ ಒಂದಾದರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.