ETV Bharat / state

ಗುಂಡುರಾವ್‌ನಗರ ಯುವಕನ ಹತ್ಯೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ - ಚಾಕುವಿನಿಂದ ಇರಿತಕ್ಕೊಳಗಾದ ನಂದಕಿಶೋರ್‌

ಚಾಕುವಿನಿಂದ ಇರಿತಕ್ಕೊಳಗಾದ ನಂದಕಿಶೋರ್‌ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು..

4-arrested-for-young-man-murder-case-in-mysuru
ಗಲಾಟೆಯಲ್ಲಿ ಯುವಕನ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
author img

By

Published : Oct 11, 2021, 2:41 PM IST

ಮೈಸೂರು : ಗುಂಡುರಾವ್‌ನಗರದ ಯುವಕನ ಕೊಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಎರಡು ಗುಂಪುಗಳ ನಡುವೆ ಗುಂಡೂರಾವ್ ನಗರದಲ್ಲಿ ಮಾರಾಮಾರಿ ನಡೆದು ನಂದಕಿಶೋರ್‌ ಎಂಬುವರ ಹತ್ಯೆ ಆಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ನಾಲ್ವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಗುಂಡೂರಾವ್ ನಗರ ಹಾಗೂ ಕನಕಗಿರಿ ಮಧ್ಯೆ ಇರುವ ಖಾಲಿ ಜಾಗದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಚಾಕುವಿನಿಂದ ಇರಿತಕ್ಕೊಳಗಾದ ನಂದ ಕಿಶೋರ್‌ ಸ್ಥಳದಲ್ಲೇ ಮೃತಪಟ್ಟಿದ್ದರು.

ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಯಲ್ಲಿ ಗಾಯಗೊಂಡ ಈತನ ಸ್ನೇಹಿತ ಸಂಜಯ್ (25)ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದು ತಿಳಿದು ಬಂದಿಲ್ಲ.

ಇದನ್ನೂ ಓದಿ: ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ ವ್ಯಕ್ತಿ ನೀರುಪಾಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.