ETV Bharat / state

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 40 ವರ್ಷ ಜೈಲು ಶಿಕ್ಷೆ - ETv Bharat kannada news

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ವ್ಯಕ್ತಿಗೆ ಮೈಸೂರಿನ ಪೋಕ್ಸೊ ವಿಶೇಷ ನ್ಯಾಯಾಲಯ 43 ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Mysore POCSO Special Court
ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ
author img

By

Published : Nov 23, 2022, 11:36 AM IST

ಮೈಸೂರು:‌ ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಿಹಾರ ಮೂಲದ ವ್ಯಕ್ತಿಗೆ ಮೈಸೂರಿನ ಪೋಕ್ಸೊ ವಿಶೇಷ ನ್ಯಾಯಾಲಯ 43 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ತಿ.ನರಸೀಪುರ ತಾಲೂಕಿನ ಫಾರಂ ಹೌಸ್‌ನಲ್ಲಿ ಕುದುರೆಗಳಿಗೆ ಲಾಳ ಕಟ್ಟುವ ಕೆಲಸ ಮಾಡಿಕೊಂಡಿದ್ದ ಬಿಹಾರ ಮೂಲದ ನಾಜೀಮ್ ಶಿಕ್ಷೆಗೆ ಗುರಿಯಾದವನು.

ಈತ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ. ಬಾಲಕಿ ಭಯಗೊಂಡು ಪೋಷಕರಿಗೆ ನಡೆದ ದೌರ್ಜನ್ಯವನ್ನು ವಿವರಿಸಿದ್ದಾಳೆ. ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶೈಮಾ ಖಮ್ರೋಜ್ ಅವರು ಅಪರಾಧಿಗೆ 43 ವರ್ಷ ಶಿಕ್ಷೆ, 51 ಸಾವಿರ ರೂ ದಂಡ ವಿಧಿಸಿದ್ದರು. ಅಲ್ಲದೇ ನೊಂದ ಬಾಲಕಿ 7 ಲಕ್ಷ ರೂ. ಪರಿಹಾರ ಪಡೆಯಲು ಅರ್ಹಳು ಎಂದು ಆದೇಶದಲ್ಲಿ ತಿಳಿಸಿದ್ದರು. ಸರಕಾರದ ಪರವಾಗಿ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು.

ಇದನ್ನೂ ಓದಿ: ಬಾಲಕ-ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ.. ಆರೋಪಿಗೆ 30 ವರ್ಷ ಜೈಲು ಶಿಕ್ಷೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.