ಮೈಸೂರು: ಜಿಲ್ಲೆಯಲ್ಲಿಂದು 404 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 45,042 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು 353 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ ಒಟ್ಟು 36,823 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.
ಇನ್ನು 7,296 ಸಕ್ರಿಯ ಪ್ರಕರಣಗಳಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 923ಕ್ಕೆ ಏರಿಕೆಯಾಗಿದೆ.