ಮೈಸೂರು: ಜಿಲ್ಲೆಯಲ್ಲಿ ಮತ್ತೆ 45 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಒಟ್ಟಾರೆ ಸಕ್ರಿಯ ಪ್ರಕರಣ 205ಕ್ಕೇರಿದೆ. ನಿನ್ನೆ ಮೂವರು ಸಾವನ್ನಪ್ಪಿದ್ದರೆ, ಗುಣಮುಖರಾದ 12 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಮೈಸೂರಿನಲ್ಲಿ ಈವರೆಗೆ ಒಟ್ಟು 481 ಪ್ರಕರಣಗಳು ಕಾಣಿಸಿಕೊಂಡಿದ್ದು, ಅದರಲ್ಲಿ 268 ಮಂದಿ ಗುಣಮುಖರಾಗಿದ್ದಾರೆ. 205 ಸಕ್ರಿಯ ಪ್ರಕರಣಗಳಿವೆ.
23,706 ಮಂದಿಯ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಅದರಲ್ಲಿ 23,224 ಮಂದಿಯ ವರದಿ ನೆಗೆಟಿವ್ ಬಂದಿದೆ. ಸೋಮವಾರ ಮೂವರು ಸೇರಿದಂತೆ ಒಟ್ಟು 8 ಮಂದಿ ಸಾವನ್ನಪ್ಪಿದ್ದು, 25 ಕಂಟೈನ್ಮೆಂಟ್ ಝೋನ್ಗಳಿವೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.